ADVERTISEMENT

ಮಹಿಳೆ ಘನತೆಗೆ ಚ್ಯುತಿ ಆರೋಪ: ಎಚ್.ಡಿ.ರೇವಣ್ಣ ಬಿಡುಗಡೆ

​ಪ್ರಜಾವಾಣಿ ವಾರ್ತೆ
Published 29 ಡಿಸೆಂಬರ್ 2025, 15:21 IST
Last Updated 29 ಡಿಸೆಂಬರ್ 2025, 15:21 IST
ಎಚ್.ಡಿ.ರೇವಣ್ಣ
ಎಚ್.ಡಿ.ರೇವಣ್ಣ   

ಬೆಂಗಳೂರು: ಮನೆಕೆಲಸದ ಮಹಿಳೆಯ ಘನತೆಗೆ ಚ್ಯುತಿ ಉಂಟು ಮಾಡಿದ ಆರೋಪ ಎದುರಿಸುತ್ತಿದ್ದ ಹೊಳೆನರಸೀಪುರ ಕ್ಷೇತ್ರದ ಜೆಡಿಎಸ್‌ ಶಾಸಕ ಎಚ್‌.ಡಿ. ರೇವಣ್ಣ ವಿರುದ್ಧದ ಕ್ರಿಮಿನಲ್ ಪ್ರಕರಣದ ಅಪರಾಧ ಪರಿಗಣಿಸಲು ಜನಪ್ರತಿನಿಧಿಗಳ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ನಿರಾಕರಿಸಿದೆ.

ಈ ಸಂಬಂಧ ಹೊಳೆನರಸೀಪುರ ಟೌನ್ ಪೊಲೀಸ್ ಠಾಣೆಯಲ್ಲಿ, ಭಾರತೀಯ ದಂಡ ಸಂಹಿತೆ-1860ರ ಕಲಂ 354 ಎ (ಲೈಂಗಿಕ ಸಮ್ಮತಿಗಾಗಿ ಒತ್ತಾಯ ಅಥವಾ ಮನವಿ) ಅಡಿಯಲ್ಲಿ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣದಿಂದ ರೇವಣ್ಣ ಅವರನ್ನು ಬಿಡುಗಡೆ ಮಾಡಲಾಗಿದೆ.

ಪ್ರಕರಣದ ವಿಚಾರಣೆ ನಡೆಸುತ್ತಿದ್ದ, "ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ"ಯ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ನ್ಯಾಯಾಧೀಶ ಕೆ.ಎಂ‌.ಶಿವಕುಮಾರ್ ಈ ಕುರಿತ ಆದೇಶವನ್ನು ಸೋಮವಾರ ಪ್ರಕಟಿಸಿದ್ದಾರೆ.

"ಸಂತ್ರಸ್ತೆಯು, ಎಚ್.ಡಿ.ರೇವಣ್ಣ ಅವರ ವಿರುದ್ಧ ದೂರು ದಾಖಲಿಸುವಲ್ಲಿ ವಿಳಂಬ ತೋರಿದ್ದಾರೆ. ಹಾಗಾಗಿ, ವಿಳಂಬ ತೋರಿರುವುದನ್ನು ಕ್ಷಮಿಸಿ ಶಿಕ್ಷಾರ್ಹ ಅಪರಾಧದ ವಿಚಾರಣೆ ಮುಂದುವರಿಸಲು ಇದು ಸೂಕ್ತ ಪ್ರಕರಣವಲ್ಲ" ಎಂಬ ಅಭಿಪ್ರಾಯವನ್ನು ನ್ಯಾಯಾಧೀಶರು ವ್ಯಕ್ತಪಡಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.