ADVERTISEMENT

ಉಪಚುನಾವಣೆ ಮುಂದೂಡಿಕೆ: ಸುಪ್ರೀಂ ತೀರ್ಪು ಸ್ವಾಗತಿಸಿದ ಎಚ್.ಡಿ.ರೇವಣ್ಣ

ಹರ್ಷ ವ್ಯಕ್ತಪಡಿಸಿದ ಅನರ್ಹ ಶಾಸಕರು

​ಪ್ರಜಾವಾಣಿ ವಾರ್ತೆ
Published 26 ಸೆಪ್ಟೆಂಬರ್ 2019, 12:59 IST
Last Updated 26 ಸೆಪ್ಟೆಂಬರ್ 2019, 12:59 IST
ಎಚ್.ಡಿ.ರೇವಣ್ಣ
ಎಚ್.ಡಿ.ರೇವಣ್ಣ   

ಬೆಂಗಳೂರು: ಅನರ್ಹ ಶಾಸಕರ ಪ್ರಕರಣ ಇತ್ಯರ್ಥಗೊಳಿಸುವ ಸಲುವಾಗಿ ರಾಜ್ಯದಲ್ಲಿನ ಉಪಚುನಾವಣೆಯನ್ನು ರದ್ದುಪಡಿಸಿರುವ ಸುಪ್ರೀಂ ಕೋರ್ಟ್‌ನ ಆದೇಶವನ್ನು ಸ್ವಾಗತಿಸುವುದಾಗಿ ಜೆಡಿಎಸ್‌ ಮುಖಂಡ ಎಚ್‌.ಡಿ. ರೇವಣ್ಣ ಹೇಳಿದ್ದಾರೆ.

‘ನಮಗೆ ನ್ಯಾಯಾಲಯದ ಮೇಲೆ ನಂಬಿಕೆ ಇದೆ. ಮುಂದೆ ಬರಲಿರುವ ತೀರ್ಪು ಇಡೀ ದೇಶಕ್ಕೆ ಅನ್ವಯವಾಗಲಿರುವುದರಿಂದ ಉತ್ತಮ ತೀರ್ಪೇ ಹೊರಬರುತ್ತದೆ ಎಂಬ ವಿಶ್ವಾಸ ಇದೆ’ ಎಂದು ಅವರು ಪಕ್ಷದ ಕಚೇರಿಯಲ್ಲಿ ಸುದ್ದಿಗಾರರಿಗೆ ತಿಳಿಸಿದರು.

ಉಪ ಚುನಾವಣೆ ಮುಂದೂಡಿಕೆ ಬಗ್ಗೆಕೆ.ಆರ್.ಪೇಟೆಯಲ್ಲಿ ಅನರ್ಹ ಶಾಸಕ ಕೆ.ಸಿ.ನಾರಾಯಣಗೌಡ ಹರ್ಷ ವ್ಯಕ್ತಪಡಿಸಿದ್ದಾರೆ.

‘ಉಪಚುನಾವಣೆ ಘೋಷಣೆಯೇ ಆಶ್ಚರ್ಯ ತಂದಿತ್ತು. ನಮ್ಮ‌ ಪ್ರಕರಣದ ವಿಚಾರಣೆ ಪೂರ್ಣಗೊಳ್ಳುವ‌ ಮೊದಲೇ ಚುನಾವಣೆ ಘೋಷಣೆಯಾಗಿತ್ತು.‌ ಈಗ ಸುಪ್ರೀಂ‌ ಕೋರ್ಟ್ ತಡೆ ನೀಡಿದ್ದು ಸಂತಸ ತಂದಿದೆ’ ಎಂದು ಯಲ್ಲಾಪುರದ ಅನರ್ಹ ಶಾಸಕಶಿವರಾಮ ಹೆಬ್ಬಾರ್ ಹೇಳಿದ್ದಾರೆ.

ಇನ್ನಷ್ಟು...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.