ADVERTISEMENT

ಜಾನುವಾರುಗಳಿಗೆ ಚರ್ಮ ಗಂಟು ರೋಗ: ಪರಿಹಾರ ಹೆಚ್ಚಳಕ್ಕೆ ಎಚ್‌ಡಿಕೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 9 ಅಕ್ಟೋಬರ್ 2022, 15:35 IST
Last Updated 9 ಅಕ್ಟೋಬರ್ 2022, 15:35 IST
ಎಚ್‌.ಡಿ.ಕುಮಾರಸ್ವಾಮಿ
ಎಚ್‌.ಡಿ.ಕುಮಾರಸ್ವಾಮಿ   

ಬೆಂಗಳೂರು: ಚರ್ಮ ಗಂಟು ರೋಗದಿಂದ ಜಾನುವಾರುಗಳನ್ನು ಕಳೆದುಕೊಳ್ಳುತ್ತಿರುವ ರೈತರಿಗೆ ನೀಡುತ್ತಿರುವ ಪರಿಹಾರದ ಮೊತ್ತವನ್ನು ತಲಾ ₹ 50,000ಕ್ಕೆ ಹೆಚ್ಚಿಸಬೇಕು ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ ಆಗ್ರಹಿಸಿದರು.

ಸುದ್ದಿಗಾರರ ಜತೆ ಭಾನುವಾರ ಮಾತನಾಡಿದ ಅವರು, ‘ಚರ್ಮ ಗಂಟು ರೋಗದಿಂದ ಜಾನುವಾರುಗಳು ಮೃತಪಟ್ಟರೆ ಅವುಗಳ ಮಾಲೀಕರಿಗೆ ತಲಾ ₹ 20,000 ಪರಿಹಾರ ನೀಡುವುದಾಗಿ ಸರ್ಕಾರ ಹೇಳಿದೆ. ಅದು ಇನ್ನೂ ಘೋಷಣೆಯ ಹಂತದಲ್ಲೇ ಇದೆ. ಜೀವನಕ್ಕೆ ಆಧಾರವಾಗಿದ್ದ ಜಾನುವಾರುಗಳನ್ನು ಕಳೆದುಕೊಂಡ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ’ ಎಂದು ಹೇಳಿದರು.

ಸರ್ಕಾರ ಈಗ ಘೋಷಿಸಿರುವ ಪರಿಹಾರದ ಮೊತ್ತದಿಂದ ರೈತರ ಸಂಕಷ್ಟ ಪರಿಹಾರ ಆಗುವುದಿಲ್ಲ. ಆದ್ದರಿಂದ ಪ್ರತಿ ಜಾನುವಾರಿಗೆ ತಲಾ ₹ 50,000 ಪರಿಹಾರ ನೀಡಬೇಕು. ಜಾನುವಾರುಗಳ ಸಾವಿನ ಸಂಖ್ಯೆ ಹೆಚ್ಚುತ್ತಿದ್ದು, ಮರಣೋತ್ತರ ಪರೀಕ್ಷೆಗೂ ವೈದ್ಯರು ಸಿಗುತ್ತಿಲ್ಲ. ಜಾನುವಾರುಗಳಿಗೆ ಲಸಿಕೆ ನೀಡಲು ಮತ್ತು ಪರಿಹಾರ ಒದಗಿಸಲು ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.