ADVERTISEMENT

ಲಾಕ್‌ಡೌನ್‌ ಸಮಸ್ಯೆಯಲ್ಲಿ ಸಿಲುಕಿದವರಿಗಾಗಿ ‘ಎಚ್‌ಡಿಕೆ ಜನತಾ ದಾಸೋಹ’

​ಪ್ರಜಾವಾಣಿ ವಾರ್ತೆ
Published 1 ಏಪ್ರಿಲ್ 2020, 9:25 IST
Last Updated 1 ಏಪ್ರಿಲ್ 2020, 9:25 IST
ಲಾಕ್‌ಡೌನ್‌ನಿಂದ ಸಮಸ್ಯೆಗೆ ಸಿಲುಕಿದವರಿಗೆ ಎಚ್‌ಡಿಕೆ ಜನತಾ ದಾಸೋಹ
ಲಾಕ್‌ಡೌನ್‌ನಿಂದ ಸಮಸ್ಯೆಗೆ ಸಿಲುಕಿದವರಿಗೆ ಎಚ್‌ಡಿಕೆ ಜನತಾ ದಾಸೋಹ   
""

ಬೆಂಗಳೂರು: ಲಾಕ್‌ಡೌನ್‌ನಿಂದ ಉಂಟಾದ ಸಮಸ್ಯೆಗೆ ಸಿಲುಕಿದವರಿಗೆ ಆಹಾರ ಪೂರೈಸಲು ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಅವರು ’ಎಚ್‌ಡಿಕೆ ಜನತಾ ದಾಸೋಹ’ ಆರಂಭಿಸಿದ್ದಾರೆ.

ಬಡವರು, ವಲಸೆ ಕಾರ್ಮಿಕರು, ನಿರ್ಗತಿಕರು, ದುರ್ಬಲರಿಗೆ ಲಾಕ್‌ಡೌನ್‌ ಅವಧಿಯಲ್ಲಿ ನಿತ್ಯ ಆಹಾರ ಪೂರೈಸುವುದು ‘ಎಚ್‌ಡಿಕೆ ಜನತಾ ದಾಸೋಹ’ದ ಗುರಿಯಾಗಿದೆ. ಇದರ ಅಡಿಯಲ್ಲಿ ಬೆಳಗ್ಗೆ, ಮಧ್ಯಾಹ್ನ ಮತ್ತು ರಾತ್ರಿ ಪ್ರತಿ ಅವಧಿಯಲ್ಲೂ ಸಾವಿರ ಮಂದಿಗೆ ಭೋಜನೆ ನೀಡಲಾಗುತ್ತದೆ.

ಸದ್ಯ ರಾಮನಗರ, ಚನ್ನಪಟ್ಟಣ ತಾಲೂಕಿನಲ್ಲಿ ದಾಸೋಹವನ್ನು ಆರಂಭಿಸಲಾಗಿದ್ದು, ತಮ್ಮ ಈ ನಡೆಯನ್ನೇ ಪಕ್ಷದ ಶಾಸಕರು, ಹಿಂದಿನ ಚುನಾವಣೆಯ ಪರಾಜಿತರು, ಮುಖಂಡರು ತಮ್ಮ ಕ್ಷೇತ್ರಗಳಲ್ಲಿ ಆರಂಭಿಸಬೇಕು ಎಂದೂ ಕುಮಾರಸ್ವಾಮಿ ಅವರು ಈಗಾಗಲೇ ಸಂದೇಶ ರವಾನಿಸಿದ್ದಾರೆ.

ADVERTISEMENT

ಇದಿಷ್ಟೇ ಅಲ್ಲದೇ, ರಾಮನಗರ ಜಿಲ್ಲೆಯ ಸಾರ್ವಜನಿಕರಿಗೆ ದಿನಸಿ ಪೂರೈಸಲೂ ಕುಮಾರಸ್ವಾಮಿ ಅವರು ನಿರ್ಧರಿಸಿದ್ದು, ಇದಕ್ಕಾಗಿ ಮಾಹಿತಿ ಸಂಗ್ರಹ ಕಾರ್ಯ ಆರಂಭವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.