ADVERTISEMENT

ಇಬ್ರಾಹಿಂ ಭೇಟಿ ಮಾಡಿದ ಎಚ್‌ಡಿಕೆ

​ಪ್ರಜಾವಾಣಿ ವಾರ್ತೆ
Published 19 ಅಕ್ಟೋಬರ್ 2021, 18:12 IST
Last Updated 19 ಅಕ್ಟೋಬರ್ 2021, 18:12 IST

ಬೆಂಗಳೂರು: ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ.ಕುಮಾರಸ್ವಾಮಿ ವಿಧಾನಪರಿಷತ್‌ ಕಾಂಗ್ರೆಸ್‌ನ ಸದಸ್ಯ ಸಿ.ಎಂ.ಇಬ್ರಾಹಿಂ ಅವರನ್ನು ಮಂಗಳವಾರ ಭೇಟಿ ಮಾಡಿ ಈದ್‌ ಶುಭಾಶಯ ಕೋರಿದರು.

ಇಬ್ರಾಹಿಂ ಅವರನ್ನು ಜೆಡಿಎಸ್‌ಗೆ ಕರೆತರುವ ಪ್ರಯತ್ನದಲ್ಲಿ ತೊಡಗಿರುವ ಕುಮಾರಸ್ವಾಮಿ ಅವರು ಹಾನಗಲ್‌ ಮತ್ತು ಸಿಂದಗಿ ಉಪಚುನಾವಣೆ ಬಳಿಕ ನಿರ್ಧಾರ ಪ್ರಕಟಿಸುವ ಸಾಧ್ಯತೆ ಇದೆ. ಬಹುತೇಕ ಡಿಸೆಂಬರ್‌ ವೇಳೆಗೆ ಇಬ್ರಾಹಿಂ ಜೆಡಿಎಸ್‌ ಸೇರಲಿದ್ದು, ಅವರಿಗೆ ಪಕ್ಷದಲ್ಲಿ ಮಹತ್ವದ ಹುದ್ದೆಯನ್ನು ನೀಡಲಿದ್ದಾರೆ ಎಂದು ಮೂಲಗಳು ಹೇಳಿವೆ.

ಕಾಂಗ್ರೆಸ್‌ನಲ್ಲಿ ತಮಗೆ ಹೆಚ್ಚಿನ ಪ್ರಾಶಸ್ತ್ಯ ಸಿಗದ ಕಾರಣ ಬೇಸತ್ತಿರುವ ಇಬ್ರಾಹಿಂ ಅವರು ಜೆಡಿಎಸ್‌ಗೆ ಸೇರುವ ಬಗ್ಗೆ ಮನಸ್ಸು ಮಾಡಿದ್ದಾರೆ. ಅಲ್ಲದೆ, ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಅವರ ಆಪ್ತ ವಲಯದಿಂದಲೂ ದೂರವಾಗಿದ್ದಾರೆ. ಹಿಂದೆ ಜನತಾದಳದಲ್ಲಿ ಇದ್ದಾಗ ಪಕ್ಷದ ಅಧ್ಯಕ್ಷರಾಗಿದ್ದೂ, ಅಲ್ಲದೆ ಎಚ್‌.ಡಿ. ದೇವೇಗೌಡ ಪ್ರಧಾನಿ ಆದಾಗ ನಾಗರಿಕ ವಿಮಾನಯಾನ ಸಚಿವರಾಗಿಯೂ ಕಾರ್ಯ ನಿರ್ವಹಿಸಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.