ADVERTISEMENT

ಎಫ್‌ಐಆರ್‌ ದಾಖಲಿಸಿದ ಅಧಿಕಾರಿಗೆ ಸಿ.ಎಂ ಒತ್ತಡ: ಕುಮಾರಸ್ವಾಮಿ ಆರೋಪ

​ಪ್ರಜಾವಾಣಿ ವಾರ್ತೆ
Published 12 ಸೆಪ್ಟೆಂಬರ್ 2023, 16:24 IST
Last Updated 12 ಸೆಪ್ಟೆಂಬರ್ 2023, 16:24 IST
ಎಚ್‌.ಡಿ. ಕುಮಾರಸ್ವಾಮಿ
ಎಚ್‌.ಡಿ. ಕುಮಾರಸ್ವಾಮಿ   

ಬೆಂಗಳೂರು: ದಲಿತರ ಮೇಲೆ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ಸಚಿವ ಡಿ.ಸುಧಾಕರ್‌ ಅವರ ರಕ್ಷಣೆಗೆ ಸರ್ಕಾರ ನಿಂತಿದೆ. ಎಫ್‌ಐಆರ್‌ ದಾಖಲಿಸಿದ ಅಧಿಕಾರಿಗೆ ಮುಖ್ಯಮಂತ್ರಿಯೇ ಒತ್ತಡ ಹಾಕುತ್ತಿದ್ದಾರೆ ಎಂದು  ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದರು.

ನಗರದಲ್ಲಿ ಮಂಗಳವಾರ ಮಾತನಾಡಿದ ಅವರು, ದಲಿತರ ರಕ್ಷಣೆ ಮಾಡುತ್ತೇವೆ ಎಂದು ಹೇಳಿಕೊಂಡು ಅಧಿಕಾರಕ್ಕೆ ಬಂದ ಕಾಂಗ್ರೆಸ್‌ನ ಸಚಿವರೇ ದಬ್ಬಾಳಿಕೆ ನಡೆಸುತ್ತಿದ್ದಾರೆ. ದಲಿತ ವಿರೋಧಿ ಮನೋಸ್ಥಿತಿಯ ಸುಧಾಕರ್‌ ಅವರನ್ನು ಸಂಪುಟದಿಂದ ವಜಾಮಾಡಬೇಕು. ತಕ್ಷಣ ಬಂಧಿಸಬೇಕು ಎಂದು ಒತ್ತಾಯಿಸಿದರು.  

ಬೇರೆ ಪಕ್ಷದವರಿಗೆ ಮಾನ ಮರ್ಯಾದೆ ಇದೆಯೇ ಎಂದು ಪ್ರಶ್ನಿಸುವ ಸಿದ್ದರಾಮಯ್ಯ ಅವರೇ ಪೊಲೀಸರ ಮೇಲೆ ಒತ್ತಡ ಹಾಕುತ್ತಿದ್ದಾರೆ. ಅವರಿಗೆ ಆತ್ಮಸಾಕ್ಷಿ ಇದೆಯೇ? ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ ಅವರ ಮೇಲೆ ಕಾಗದದ ಚೂರು ಎಸೆದ ಘಟನೆ ಖಂಡಿಸಿದ್ದ ಸಿದ್ದರಾಮಯ್ಯ, ಕೃಷ್ಣ ಬೈರೇಗೌಡ ಅವರೇ ದಲಿತ ಸಮುದಾಯದ ಹೆಣ್ಣು ಮಗಳ ಮೇಲಿನ ದೌರ್ಜನ್ಯದ ಪ್ರಕರಣವನ್ನು ಮುಚ್ಚಿಹಾಕಲು ಪ್ರಯತ್ನಿಸುತ್ತಿರುವುದು ವಿಪರ್ಯಾಸ ಎಂದರು.

ADVERTISEMENT

ದಲಿತ ಸಂಘಟನೆಗಳು ಅನ್ಯಾಯ ಖಂಡಿಸಬೇಕು. ಸಚಿವ ಸುಧಾಕರ್‌ ವಿರುದ್ಧ ಹೋರಾಟ ನಡೆಸಬೇಕು ಎಂದು ಸಲಹೆ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.