ADVERTISEMENT

ಜುಲೈ 20ರಂದು ತಲಕಾವೇರಿಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಭೇಟಿ

​ಪ್ರಜಾವಾಣಿ ವಾರ್ತೆ
Published 14 ಜುಲೈ 2018, 12:43 IST
Last Updated 14 ಜುಲೈ 2018, 12:43 IST
ಕಾವೇರಿ ನದಿಯ ಉಗಮ ಸ್ಥಳ ತಲಕಾವೇರಿ
ಕಾವೇರಿ ನದಿಯ ಉಗಮ ಸ್ಥಳ ತಲಕಾವೇರಿ   

ಮಡಿಕೇರಿ: ‘ಕೊಡಗು ಜಿಲ್ಲೆಯಲ್ಲಿ ಸುರಿದ ಮಳೆಯಿಂದ ಕೆಆರ್‌ಎಸ್‌ ಜಲಾಶಯ ಭರ್ತಿಯಾಗಿದ್ದು, ಜುಲೈ 20ರಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಕಾವೇರಿ ನದಿಯ ಉಗಮ ಸ್ಥಳ ತಲಕಾವೇರಿಯಲ್ಲಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ’ ಎಂದು ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್‌ ಶನಿವಾರ ಇಲ್ಲಿ ತಿಳಿಸಿದರು.

‘ಮಳೆಯಿಂದ ಆಗಿರುವ ಅನಾಹುತ ಹಾಗೂ ಪರಿಹಾರ ನೀಡುವ ಸಂಬಂಧ ಜುಲೈ 19ರಂದು ಮಡಿಕೇರಿಯಲ್ಲಿ ಅಧಿಕಾರಿಗಳ ಸಭೆ ನಡೆಸಲಿದ್ದಾರೆ’ ಎಂದು ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

2007ರ ಬಿಜೆಪಿ– ಜೆಡಿಎಸ್‌ ಸಮ್ಮಿಶ್ರ ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಿದ್ದ ಕುಮಾರಸ್ವಾಮಿ ತಲಕಾವೇರಿಯಲ್ಲಿ ಪೂಜೆ ಸಲ್ಲಿಸಿದ್ದರು. 11 ವರ್ಷಗಳ ಬಳಿಕ ಅವರು ಪೂಜೆ ಸಲ್ಲಿಸಲು ಆಗಮಿಸುತ್ತಿರುವುದು ವಿಶೇಷ. ಜೆ.ಎಚ್‌.ಪಟೇಲ್‌ ಮುಖ್ಯಮಂತ್ರಿ ಆಗಿದ್ದಾಗಲೂ ಈ ಕ್ಷೇತ್ರಕ್ಕೆ ಭೇಟಿ ನೀಡಿದ್ದರು ಎಂದರು.

ADVERTISEMENT

‘ಮಡಿಕೇರಿಯಲ್ಲಿ ಜಂಗಲ್‌ ಲಾಡ್ಜ್‌, ರೆಸಾರ್ಟ್‌ ನಿರ್ಮಿಸಲು ಉದ್ದೇಶಿಸಿದ್ದು ಅದಕ್ಕೆ ಜಾಗ ಗುರುತಿಸಲಾಗಿದೆ. ಜಿಲ್ಲೆಯಲ್ಲಿ ಸಾವಿರಾರು ಹೋಂಸ್ಟೇಗಳಿದ್ದರೂ 200 ಮಂದಿ ಮಾತ್ರ ನೋಂದಣಿ ಮಾಡಿಕೊಂಡಿದ್ದಾರೆ. ಆಗಸ್ಟ್ 2ರ ಒಳಗೆ ನೋಂದಣಿ ಮಾಡಿಕೊಳ್ಳಬೇಕು. ಇಲ್ಲದಿದ್ದರೆ ಅನಧಿಕೃತ ಹೋಂಸ್ಟೇಗಳ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು’ ಎಂದು ಸಚಿವರು ಎಚ್ಚರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.