ADVERTISEMENT

ಜನತಾ ದರ್ಶನ: ಸಂಕಷ್ಟದಲ್ಲಿದ್ದ ಮಹಿಳೆಗೆ ಮುಖ್ಯಮಂತ್ರಿ ಸಹಾಯ

​ಪ್ರಜಾವಾಣಿ ವಾರ್ತೆ
Published 1 ಸೆಪ್ಟೆಂಬರ್ 2018, 11:08 IST
Last Updated 1 ಸೆಪ್ಟೆಂಬರ್ 2018, 11:08 IST
ತುಮಕೂರು ಜಿಲ್ಲೆಯ ಶಿರಾದ ನಾಗಮಣಿ ಅವರಿಗೆ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಶನಿವಾರ ನಡೆದ ಜನತಾ ದರ್ಶನದಲ್ಲಿ ₹2 ಲಕ್ಷ ಚೆಕ್ ನೀಡಿದರು. -ಪ್ರಜಾವಾಣಿ ಚಿತ್ರ
ತುಮಕೂರು ಜಿಲ್ಲೆಯ ಶಿರಾದ ನಾಗಮಣಿ ಅವರಿಗೆ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಶನಿವಾರ ನಡೆದ ಜನತಾ ದರ್ಶನದಲ್ಲಿ ₹2 ಲಕ್ಷ ಚೆಕ್ ನೀಡಿದರು. -ಪ್ರಜಾವಾಣಿ ಚಿತ್ರ   

ಬೆಂಗಳೂರು: ಹೆರಿಗೆ ಸಮಯದಲ್ಲಿ ಆಸ್ಪತ್ರೆ ಬಿಲ್ ಕಟ್ಟಲಾಗದೆ ಸಂಕಷ್ಟಕ್ಕೆ ಸಿಲುಕಿದ್ದ ತುಮಕೂರು ಜಿಲ್ಲೆಯ ಶಿರಾದ ನಾಗಮಣಿ ಅವರಿಗೆ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಶನಿವಾರ ನಡೆದ ಜನತಾ ದರ್ಶನದಲ್ಲಿ ₹2 ಲಕ್ಷ ಚೆಕ್ ನೀಡಿದರು.

ಮೂರು ತಿಂಗಳ ಮಗುವನ್ನು ಎತ್ತಿಕೊಂಡು ಬಂದಿದ್ದ ನಾಗಮಣಿ ಸಂತೋಷದಿಂದ ಊರಿಗೆ ತೆರಳಿದರು.

ಇದೇ ವೇಳೆ ಮೂರು ವರ್ಷದ ಹಿಂದೆ ಆತ್ಮಹತ್ಯೆ ಮಾಡಿಕೊಂಡಿದ್ದ ಮಂಡ್ಯ ಜಿಲ್ಲೆಯ ಹುಲಿವಾಲ ಗ್ರಾಮದ ರಾಮಯ್ಯ ಎಂಬ ರೈತನ ಕುಟುಂಬದ ಮನವಿಗೆ ಮುಖ್ಯಮಂತ್ರಿ ಸ್ಪಂದಿಸಿದರು.

ADVERTISEMENT

‘ಸಿದ್ದರಾಮಯ್ಯ ಸಿ.ಎಂ ಆಗಿದ್ದಾಗ ನಮ್ಮ ಮನೆಗೆ ಭೇಟಿ ಕೊಟ್ಟಿದ್ದರು. ಆದರೆ ಇದುವರೆಗೂ ಸರ್ಕಾರದಿಂದ ಪರಿಹಾರ ಬಂದಿಲ್ಲ’ ಎಂದು ಕುಟುಂಬಸ್ಥರು ತಿಳಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ,‘ಪರಿಹಾರ ಹಾಗೂ ಉದ್ಯೋಗಕ್ಕಾಗಿ ಮಂಡ್ಯ ಜಿಲ್ಲಾಧಿಕಾರಿಯನ್ನು ಭೇಟಿ ಮಾಡುವಂತೆ’ಸೂಚಿಸಿದರು.

ಹೈದರಾಬಾದ್ ಕರ್ನಾಟಕ ಭಾಗದ ಶಿಕ್ಷಕರ ನೇಮಕಾತಿಗೆ ಇರುವ ತೊಡಕನ್ನು ನಿವಾರಿಸುವಂತೆ ಅಫಜಲಪುರ ಶಾಸಕ ಎಂ.ವೈ ಪಾಟೀಲ್, ಮುಖ್ಯಮಂತ್ರಿ ಅವರಲ್ಲಿ ಮನವಿ ಮಾಡಿಕೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.