ADVERTISEMENT

ನಿಯಮ ಪಾಲಿಸಿದರೂ ಮಾಧ್ಯಮಗಳಲ್ಲಿ ವಿಷಕಾರಿದ ಮನಸ್ಸುಗಳು: ಎಚ್‌ಡಿಕೆ ಟ್ವೀಟ್

​ಪ್ರಜಾವಾಣಿ ವಾರ್ತೆ
Published 19 ಏಪ್ರಿಲ್ 2020, 7:39 IST
Last Updated 19 ಏಪ್ರಿಲ್ 2020, 7:39 IST
ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ
ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ    

ಬೆಂಗಳೂರು: ನನ್ನ ಪುತ್ರ ನಿಖಿಲ್‌ ವಿವಾಹದಲ್ಲಿ ಅಂತರ ಕಾಯ್ದುಕೊಂಡರೂ, ನಿಯಮ ಪಾಲಿಸಿದರೂ ಇದ್ಯಾವುದೂ ಪಾಲನೆ ಆಗಿಲ್ಲ ಎಂಬ ಚರ್ಚೆಗಳು ನಡೆದವು. ರಾಜಕೀಯ ದ್ವೇಷಕ್ಕಾಗಿ ಶುಭ ಸಮಾರಂಭದ ವಿಷಯದಲ್ಲೂ ವಿಷ ಕಾರುವ ಮನಸ್ಥಿತಿಗಳು ರಾರಾಜಿಸಿವೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದಾರೆ.

ತಮ್ಮ ಟ್ವೀಟ್‌ನಲ್ಲಿ ಈ ಬಗ್ಗೆ ತಿಳಿಸಿರುವ ಅವರು, ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ಇವೆಲ್ಲವನ್ನೂ ನಿರಾಕರಿಸುವ ಮೂಲಕ ಸತ್ಯದ ಪರ ನಿಂತಿದ್ದಾರೆ.ರಾಜ್ಯರಾಜಕಾರಣದ ದೊಡ್ಡ ಕುಟುಂಬ ಸರಳವಾಗಿ ವಿವಾಹ ಸಮಾರಂಭ ಮಾಡಿದೆ ಎಂದೂ ಯಡಿಯೂರಪ್ಪ ಅವರು ಸಹೃದಯದ ಮಾತುಗಳನ್ನಾಡಿರುವುದಕ್ಕೆ ಅವರಿಗೆ ಮನದಾಳದ ಧನ್ಯವಾದಗಳನ್ನು ತಿಳಿಸಿದ್ದಾರೆ.

ನನ್ನ ಒಡನಾಡಿಗಳು, ನನ್ನ ಹಿತೈಷಿಗಳು, ನನ್ನ ಜನ, ನನ್ನ ಕಾರ್ಯಕರ್ತರು ಇವರೆಲ್ಲರೊಂದಿಗೆ ಶುಭ ಸಮಾರಂಭವೊಂದರಲ್ಲಿ ಒಟ್ಟಿಗೆ ಸೇರಲು ವೈಯಕ್ತಿಕವಾಗಿ ನನಗೆ ಇದ್ದ ಒಂದೇ ಒಂದು ಸುವರ್ಣ ಅವಕಾಶವನ್ನು ಕೈಚೆಲ್ಲಿ ನಿಖಿಲ್‌ ವಿವಾಹವನ್ನು ಲಾಕ್‌ಡೌನ್‌ ನಿಯಮಗಳನ್ನು ಪಾಲಿಸಿ ಸರಳವಾಗಿ ಮಾಡಲಾಯಿತು.

ADVERTISEMENT

ನಿಖಿಲ್‌ ವಿವಾಹದಲ್ಲೂ ರಾಜಕೀಯ ಹುಡುಕಿದ ‘ಸಾಮಾಜಿಕ ಮಾಧ್ಯಮ’ದ ಕೆಲವು ಹುಳುಕು ಮನಸ್ಸಿನ ಮಂದಿ ತಮ್ಮ ಮನದಲ್ಲಿರುವ ವಿಷ ಕಾರಿಕೊಂಡಿದ್ದಾರೆ. ಅವರೆಲ್ಲರೂ ಶರಣರ ಈ ಮಾತನ್ನು ನೆನಪಲ್ಲಿಟ್ಟುಕೊಳ್ಳಬೇಕು.

"ಮನದ ಕೋಪ ತನ್ನ ಅರಿವಿನ ಕೇಡು
ಮನೆಯೊಳಗಣ ಕಿಚ್ಚು ಮನೆಯ ಸುಟ್ಟಲ್ಲದೆ
ನೆರೆಮನೆಯ ಸುಡದು ಕೂಡಲಸಂಗಮದೇವಾ"

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.