ಬೀದರ್: ದೇಶದ್ರೋಹ ಪ್ರಕರಣದಡಿ ಬಂಧಿಸಲಾದ ಶಾಹೀನ್ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಫರೀದಾ ಬೇಗಂ ಹಾಗೂ ಶಾಲೆಯಲ್ಲಿ ನಾಟಕದ ಸಂದರ್ಭದಲ್ಲಿ ವಿವಾದಾತ್ಮಕ ಶಬ್ದ ಬಳಸಿದ ಬಾಲಕಿಯ ತಾಯಿ ನಜಮುನ್ನೀಸಾ ಅವರು ಶನಿವಾರ ಸಂಜೆ ಜೈಲಿನಿಂದ ಬಿಡುಗಡೆಯಾದರು.
ಶುಕ್ರವಾರ ಸಂಜೆ ಜಿಲ್ಲಾ ಪ್ರಧಾನ ಹಾಗೂ ಸೆಷನ್ಸ್ ನ್ಯಾಯಾಲಯವು ಜಾಮೀನು ನೀಡಿತ್ತು.
ನ್ಯಾಯಾಲಯದ ಜಾಮೀನು ಪತ್ರವನ್ನು ಜೈಲಿನ ಅಧಿಕಾರಿಗೆ ಒಪ್ಪಿಸಿದ ನಂತರ ಇಬ್ಬರನ್ನೂ ಬಿಡುಗಡೆ ಮಾಡಲಾಯಿತು. ಫರೀದಾ ಬೇಗಂ ಅವರ ಪತಿ ಹಮೀದ್ ಬೇಗ್ ಹಾಗೂ ಶಾಹಿನ್ ಶಿಕ್ಷಣ ಸಂಸ್ಥೆಯ ಸಿಇಒ ತೌಸಿಫ್ ಮಡಿಕೇರಿ ಅವರು ಇಬ್ಬರನ್ನೂ ಜೈಲಿನಿಂದ ಕರೆದೊಯ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.