ADVERTISEMENT

ಚಲನಚಿತ್ರ ನಿರ್ಮಾಪಕ ಕಿಶೋರ್ ಪತ್ತಿಕೊಂಡಗೆ ಶಸ್ತ್ರಚಿಕಿತ್ಸೆ

​ಪ್ರಜಾವಾಣಿ ವಾರ್ತೆ
Published 5 ಜುಲೈ 2022, 15:51 IST
Last Updated 5 ಜುಲೈ 2022, 15:51 IST
ಕಿಶೋರ್ ಪತ್ತಿಕೊಂಡ
ಕಿಶೋರ್ ಪತ್ತಿಕೊಂಡ   

ಬೆಂಗಳೂರು: ಪ್ರಜ್ಞಾಹೀನ ಸ್ಥಿತಿಯಲ್ಲಿ ಶೇಷಾದ್ರಿಪುರದ ಅಪೋಲೊ ಆಸ್ಪತ್ರೆಗೆ ದಾಖಲಾಗಿದ್ದ ಚಲನಚಿತ್ರ ನಿರ್ಮಾಪಕ ಕಿಶೋರ್ ಪತ್ತಿಕೊಂಡ ಅವರಿಗೆ ಶಸ್ತ್ರಚಿಕಿತ್ಸೆ ನಡೆಸಲಾಗಿದ್ದು, ಸದ್ಯತೀವ್ರ ನಿಗಾ ಘಟಕದಲ್ಲಿ (ಐಸಿಯು) ಚಿಕಿತ್ಸೆ ಒದಗಿಸಲಾಗುತ್ತಿದೆ.

ಅಧಿಕ ರಕ್ತದೊತ್ತಡದಿಂದ ಪ್ರಜ್ಞಾಹೀನ ಸ್ಥಿತಿಗೆ ತಲುಪಿದ್ದ 40 ವರ್ಷದ ಕಿಶೋರ್ ಅವರನ್ನು ಸೋಮವಾರ ರಾತ್ರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರನ್ನು ತಪಾಸಣೆಗೆ ಒಳಪಡಿಸಿದ ವೈದ್ಯರು, ತಲೆಯಲ್ಲಿ ರಕ್ತಸ್ರಾವ ಆಗಿರುವುದನ್ನು ಗುರುತಿಸಿ, ಶಸ್ತ್ರಚಿಕಿತ್ಸೆ ನಡೆಸಿದ್ದರು.

‘ವೈದ್ಯರ ತಂಡವು ಕಿಶೋರ್ ಅವರಿಗೆ ಸೋಮವಾರ ರಾತ್ರಿಯೇ ಶಸ್ತ್ರಚಿಕಿತ್ಸೆ ನಡೆಸುವ ಮೂಲಕ ತಲೆಯಲ್ಲಿ ರಕ್ತಸ್ರಾವ ತಡೆದಿದೆ. ಐಸಿಯು ಘಟಕದಲ್ಲಿರುವ ಅವರಿಗೆ, ವೆಂಟಿಲೇಟರ್ ಸಂಪರ್ಕದೊಂದಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಅವರ ಆರೋಗ್ಯದಲ್ಲಿ ಚೇತರಿಕೆ ಕಾಣುತ್ತಿದೆ’ ಎಂದು ಅಪೋಲೊ ಆಸ್ಪತ್ರೆ ‍ಪ್ರಕಟಣೆ ತಿಳಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.