ADVERTISEMENT

ಸಿಇಟಿ ಅಭ್ಯರ್ಥಿಗಳ ಪರೀಕ್ಷೆ, ವೈದ್ಯಕೀಯ ತಪಾಸಣೆ ಮುಂದೂಡಿಕೆ

​ಪ್ರಜಾವಾಣಿ ವಾರ್ತೆ
Published 24 ಏಪ್ರಿಲ್ 2024, 15:13 IST
Last Updated 24 ಏಪ್ರಿಲ್ 2024, 15:13 IST
<div class="paragraphs"><p>ಪರೀಕ್ಷೆ–ಪ್ರಾತಿನಿಧಿಕ ಚಿತ್ರ</p></div>

ಪರೀಕ್ಷೆ–ಪ್ರಾತಿನಿಧಿಕ ಚಿತ್ರ

   

ಬೆಂಗಳೂರು: ಇದೇ ಏ.25 ಮತ್ತು 26ರಂದು ನಡೆಯಬೇಕಿದ್ದ ಸಿಇಟಿಗೆ ಹಾಜರಾಗಿದ್ದ ಅಂಗವಿಕಲ ಅಭ್ಯರ್ಥಿಗಳ ವೈದ್ಯಕೀಯ ತಪಾಸಣೆ ಹಾಗೂ ಮೇ 4ರಂದು ನಡೆಯಬೇಕಿದ್ದ ದ್ವಿತೀಯ ಪಿಯು (ವಾರ್ಷಿಕ ಪರೀಕ್ಷೆ–2) ಗೃಹ ವಿಜ್ಞಾನ ಪರೀಕ್ಷೆಯನ್ನು ಮುಂದೂಡಲಾಗಿದೆ.

ರಾಜ್ಯದಲ್ಲಿ ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಏ. 26ರಂದು ನಡೆಯಲಿರುವ ಕಾರಣ ವೈದ್ಯಕೀಯ ತಪಾಸಣೆ ಮುಂದೂಡಲಾಗಿದೆ. ಹೊಸ ದಿನಾಂಕವನ್ನು ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಹೇಳಿದೆ. 

ADVERTISEMENT

ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ–2 ಇದೇ ತಿಂಗಳ 29ರಿಂದ ರಾಜ್ಯದ 301 ಕೇಂದ್ರಗಳಲ್ಲಿ ಆರಂಭವಾಗಲಿದೆ. ಮೇ 4ರಂದು ನಿಗದಿಯಾಗಿದ್ದ ಗೃಹ ವಿಜ್ಞಾನ ಪರೀಕ್ಷೆ ಮೇ 9ರಂದು ಬೆಳಿಗ್ಗೆ 10.15ರಿಂದ ಮಧ್ಯಾಹ್ನ 1.30ರವರೆಗೆ ನಡೆಯಲಿದೆ. ಪರೀಕ್ಷೆ ತೆಗೆದುಕೊಂಡಿರುವ ವಿದ್ಯಾರ್ಥಿಗಳು http://kseab.karnataka.gov.in ಮೂಲಕ ಪ್ರವೇಶ ಪತ್ರ ಪಡೆಯಬಹುದು. ಹೆಚ್ಚಿನ ಮಾಹಿತಿಗೆ ತಮ್ಮ ಕಾಲೇಜುಗಳ ಪ್ರಾಂಶುಪಾಲರನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.