ADVERTISEMENT

ಸಿಎಂಒ, ತಜ್ಞ ವೈದ್ಯರ ನೇಮಕಕ್ಕೆ ಪ್ರಸ್ತಾವ

ಆರೋಗ್ಯ ಇಲಾಖೆ ಆಯುಕ್ತ ಪಂಕಜ್‌ಕುಮಾರ್ ಪಾಂಡೆ

​ಪ್ರಜಾವಾಣಿ ವಾರ್ತೆ
Published 20 ಏಪ್ರಿಲ್ 2019, 18:35 IST
Last Updated 20 ಏಪ್ರಿಲ್ 2019, 18:35 IST
ಪಂಕಜ್ ಕುಮಾರ್ ಪಾಂಡೆ
ಪಂಕಜ್ ಕುಮಾರ್ ಪಾಂಡೆ   

ಚಿತ್ರದುರ್ಗ: ‘ತಜ್ಞ ವೈದ್ಯರು, ಮುಖ್ಯ ವೈದ್ಯಕೀಯ ಅಧಿಕಾರಿ (ಸಿಎಂಒ)ಗಳ ಕೊರತೆ ನೀಗಿಸಲು ಲೋಕಸಭಾ ಚುನಾವಣೆ ಮುಗಿದ ಬಳಿಕ ರಾಜ್ಯದ ಎಲ್ಲ ಜಿಲ್ಲಾ ಆಸ್ಪತ್ರೆಗಳಲ್ಲೂ ನೇಮಕಗೊಳಿಸಲು ಪ್ರಸ್ತಾವ ಸಲ್ಲಿಸಲಾಗುವುದು’ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಆಯುಷ್ ಸೇವೆಗಳ ಇಲಾಖೆ ಆಯುಕ್ತ ಪಂಕಜ್‌ಕುಮಾರ್ ಪಾಂಡೆ ತಿಳಿಸಿದರು.

ಜಿಲ್ಲಾ ಆಸ್ಪತ್ರೆಯಲ್ಲಿ ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಎಂಬಿಬಿಎಸ್ ಪೂರ್ಣಗೊಳಿಸಿದವರನ್ನು ಸಿಎಂಒ ಆಗಿ ವರ್ಷದಿಂದಲೂ ನೇಮಕ ಮಾಡಿಕೊಳ್ಳಲಾಗುತ್ತಿದೆ. 450 ಹುದ್ದೆ ಖಾಲಿ ಇದ್ದು, ಚುನಾವಣೆ ಮುಗಿದ ನಂತರ ಈ ಪ್ರಕ್ರಿಯೆ ಮತ್ತೆ ಮುಂದುವರೆಯಲಿದೆ’ ಎಂದರು.

‘ವೈದ್ಯರ ಕೊರತೆಯಿಂದಾಗಿ ಅನೇಕ ರೋಗಿಗಳಿಗೆ ಸಮಯಕ್ಕೆ ಸರಿಯಾಗಿ ಸೂಕ್ತ ಚಿಕಿತ್ಸೆ ಸಿಗುತ್ತಿಲ್ಲ. ಈ ಕೊರತೆ ನೀಗಿಸಲು ತಜ್ಞ ವೈದ್ಯರ ನೇಮಕಕ್ಕೂ ತೀರ್ಮಾನಿಸಲಾಗಿದೆ. ಆರ್ಥಿಕ ಇಲಾಖೆ ಅನುಮತಿ ನಂತರ ನೇಮಕಕ್ಕೆ ಕ್ರಮ ಕೈಗೊಳ್ಳಲಿದ್ದೇವೆ’ ಎಂದು ಹೇಳಿದರು.

ADVERTISEMENT

‘ಇಲಾಖೆ ಅಂದುಕೊಂಡಂತೆ ಅನುಮತಿ ದೊರೆತಲ್ಲಿ ವಿವಿಧ ಜಿಲ್ಲೆಗಳಿಗೆ 15 ವೈದ್ಯರನ್ನು ಕರ್ತವ್ಯಕ್ಕೆ ನಿಯೋಜಿಸಲು ಸಾಧ್ಯವಾಗಲಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.