ADVERTISEMENT

ಆರೋಗ್ಯ ಇಲಾಖೆಯಲ್ಲಿ ವೈದ್ಯಕೀಯ ಶಿಕ್ಷಣ ವಿಲೀನಕ್ಕೆ ಒಲವು

​ಪ್ರಜಾವಾಣಿ ವಾರ್ತೆ
Published 14 ಅಕ್ಟೋಬರ್ 2019, 20:17 IST
Last Updated 14 ಅಕ್ಟೋಬರ್ 2019, 20:17 IST
ರಾಯಚೂರಿನ ರಿಮ್ಸ್‌ ಆಸ್ಪತ್ರೆಯ ಸಾಮಾನ್ಯ ವಾರ್ಡ್‌ನಲ್ಲಿ ಆರೋಗ್ಯ ಸಚಿವ ಶ್ರೀರಾಮುಲು ಅವರು ಸೋಮವಾರ ವಾಸ್ತವ್ಯ ಹೂಡಿದರು
ರಾಯಚೂರಿನ ರಿಮ್ಸ್‌ ಆಸ್ಪತ್ರೆಯ ಸಾಮಾನ್ಯ ವಾರ್ಡ್‌ನಲ್ಲಿ ಆರೋಗ್ಯ ಸಚಿವ ಶ್ರೀರಾಮುಲು ಅವರು ಸೋಮವಾರ ವಾಸ್ತವ್ಯ ಹೂಡಿದರು   

ರಾಯಚೂರು:‘ವೈದ್ಯಕೀಯ ಶಿಕ್ಷಣ ಇಲಾಖೆ ಹಾಗೂ ಆರೋಗ್ಯ ಇಲಾಖೆಗಳಿಗೆ ಒಬ್ಬರೇ ಸಚಿವರು ಇರಬೇಕು. ಈ ಎರಡೂ ಇಲಾಖೆಗಳು ಒಂದಾಗುವುದಕ್ಕಾಗಿ ಹೊಸ ನೀತಿಯೊಂದು ಬರಬೇಕಿದೆ’ ಎಂದು ಆರೋಗ್ಯ ಸಚಿವ ಶ್ರೀರಾಮುಲು ಹೇಳಿದರು.

ರಾಯಚೂರು ವೈದ್ಯ ವಿಜ್ಞಾನಗಳ ಸಂಸ್ಥೆ (ರಿಮ್ಸ್‌) ಆಸ್ಪತ್ರೆಯಲ್ಲಿ ಸೋಮವಾರ ವಾಸ್ತವ್ಯ ಮಾಡಿದ ಅವರು,ಸುದ್ದಿಗಾರರೊಂದಿಗೆ ಮಾತನಾಡಿದರು.

‘ಸರ್ಕಾರಿ ಆಸ್ಪತ್ರೆಗಳು ಖಾಸಗಿ ಆಸ್ಪತ್ರೆಗಳಿಗೆ ಸ್ಪರ್ಧೆ ಮಾಡಬೇಕಿದೆ. ಆಸ್ಪತ್ರೆ ವ್ಯವಸ್ಥೆ ತಿಳಿಯುವುದಕ್ಕಾಗಿ ವಾಸ್ತವ್ಯ ಮಾಡುತ್ತಿದ್ದು, ಮೂಲ ಸೌಕರ್ಯ ಸುಧಾರಣೆಗೆ ಕ್ರಮ ವಹಿಸಲಾಗುವುದು. ವೈದ್ಯರ ಕೊರತೆ ಸಮಸ್ಯೆ ಪರಿಹರಿಸುತ್ತೇವೆ. ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುವ ಸರ್ಕಾರಿ ವೈದ್ಯರು ರಾಜೀನಾಮೆ ಕೊಟ್ಟು ಹೋಗಲಿ’ ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.