
ಪ್ರಜಾವಾಣಿ ವಾರ್ತೆ
ಪ್ರಾತಿನಿಧಿಕ ಚಿತ್ರ
ಬೆಂಗಳೂರು: ‘ಫ್ರಿಡ್ಜ್ ನೀರು, ತಂಪು ಪಾನೀಯಗಳನ್ನು ಕುಡಿಯಬಾರದು ಎಂದು ಸುತ್ತೋಲೆ ಹೊರಡಿಸಿಲ್ಲ ಎಂದು ಆರೋಗ್ಯ ಇಲಾಖೆ ಸ್ಪಷ್ಟಪಡಿಸಿದೆ.
ಚಿಕ್ಕಬಳ್ಳಾಪುರದ ಸಿದ್ದರಾಮಯ್ಯ ಕಾನೂನು ವಿದ್ಯಾಲಯದ ಪ್ರಾಚಾರ್ಯರು, ಮೇ 2ರಂದು ಹೊರಡಿಸಿರುವ ಪ್ರಕಟಣೆಯಲ್ಲಿ ‘ಕೋವಿಶೀಲ್ಡ್ ಲಸಿಕೆ ಹಾಕಿಸಿಕೊಂಡಿರುವ ಪರಿಣಾಮ ರಕ್ತ ಹೆಪ್ಪುಗಟ್ಟುವುದು, ದಿಢೀರ್ ಹೃದಯಾಘಾತ ಸಂಭವಿಸಿ ಪ್ರಾಣ ಹಾನಿಯಾಗುವುದಾಗಿ ವರದಿ ಆಗುತ್ತಿದೆ. ಹಾಗಾಗಿ, ಆರೋಗ್ಯ ಇಲಾಖೆಯು ತಿಳಿಸಿರುವ ಮಾಹಿತಿ ಪ್ರಕಾರ ವಿದ್ಯಾರ್ಥಿಗಳು, ಪೋಷಕರು ಫ್ರಿಡ್ಜ್ ನೀರು, ತಂಪು ಪಾನೀಯಗಳನ್ನು ಕುಡಿಯಬಾರದು. ಐಸ್‌ಕ್ರೀಮ್ ಸೇವಿಸಬಾರದು’ ಎಂದು ತಿಳಿಸಲಾಗಿತ್ತು. ಈ ಪ್ರಕಟಣೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು.
ಇದಕ್ಕೆ ಆರೋಗ್ಯ ಇಲಾಖೆ ಸ್ಪಷ್ಟನೆ ನೀಡಿದ್ದು, ‘ಇದು ಸತ್ಯಕ್ಕೆ ದೂರವಾದ ಮಾಹಿತಿ‘ ಎಂದು ಹೇಳಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.