ADVERTISEMENT

ಕೋವಿಡ್ ಆತಂಕ: ಆಸ್ಪತ್ರೆಗಳನ್ನು ಸಜ್ಜುಗೊಳಿಸಲು ಆರೋಗ್ಯ ಇಲಾಖೆ ಸೂಚನೆ

​ಪ್ರಜಾವಾಣಿ ವಾರ್ತೆ
Published 19 ಡಿಸೆಂಬರ್ 2023, 23:30 IST
Last Updated 19 ಡಿಸೆಂಬರ್ 2023, 23:30 IST
<div class="paragraphs"><p> ಆರೋಗ್ಯ ಇಲಾಖೆ ಸಿಬ್ಬಂದಿ ಸಾರ್ವಜನಿಕರಿಗೆ ಕೋವಿಡ್ ಪರೀಕ್ಷೆ ನಡೆಸಿದರು.</p></div>

ಆರೋಗ್ಯ ಇಲಾಖೆ ಸಿಬ್ಬಂದಿ ಸಾರ್ವಜನಿಕರಿಗೆ ಕೋವಿಡ್ ಪರೀಕ್ಷೆ ನಡೆಸಿದರು.

   

–ಪ್ರಜಾವಾಣಿ ಚಿತ್ರ

ಬೆಂಗಳೂರು: ಕೋವಿಡ್ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ ಕ್ರಮವಾಗಿ ಆಸ್ಪತ್ರೆಗಳಲ್ಲಿನ ತೀವ್ರ ನಿಗಾ ಘಟಕ (ಐಸಿಯು), ವೈದ್ಯಕೀಯ ಆಮ್ಲಜನಕ ಘಟಕ ಸೇರಿ ವಿವಿಧ ಘಟಕಗಳನ್ನು ಸಜ್ಜುಗೊಳಿಸುವಂತೆ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಇಲಾಖೆ ಆಯುಕ್ತ ಡಿ. ರಂದೀಪ್ ಸೂಚಿಸಿದ್ದಾರೆ.

ADVERTISEMENT

‘ವೈದ್ಯಕೀಯ ಸಿಲಿಂಡರ್‌ಗಳನ್ನು ತುಂಬಿಸಲು ಕ್ರಮ ಕೈಗೊಳ್ಳಬೇಕು. ‘ಪ್ರೆಷರ್ ಸ್ವಿಂಗ್ ಅಡ್ಸಾರ್ಪ್ಶನ್’ (ಪಿಎಸ್‌ಎ) ಆಮ್ಲಜನಕ ತಯಾರಿಕಾ ಘಟಕಗಳು, ವೈದ್ಯಕೀಯ ಆಮ್ಲಜನಕ ಘಟಕಗಳು, ಐಸಿಯು ಉಪಕರಣಗಳು ಹಾಗೂ ವೆಂಟಿಲೇಟರ್‌ಗಳನ್ನು ಪರಿಶೀಲಿಸಿ, ಕಾರ್ಯನಿರ್ವಹಣೆ ಬಗ್ಗೆ ವರದಿ ನೀಡಬೇಕು. ವೈದ್ಯಕೀಯ ಗ್ಯಾಸ್ ಪೈಪ್‌ಲೈನ್ ಬಗ್ಗೆ ತಪಾಸಣೆ ನಡೆಸಬೇಕು. ಔಷಧಗಳ ಲಭ್ಯತೆ ಬಗ್ಗೆಯೂ ಕ್ರಮಕೈಗೊಳ್ಳಬೇಕು‘ ಎಂದು ಸುತ್ತೋಲೆಯಲ್ಲಿ ತಿಳಿಸಿದ್ದಾರೆ.

‘ಐಸಿಯು ಉಪಕರಣಗಳು, ಪಿಎಸ್‌ಎ ಆಮ್ಲಜನಕ ತಯಾರಿಕಾ ಘಟಕ ಸೇರಿ ವಿವಿಧ ಘಟಕಗಳ ಉಪಕರಣಗಳ ರಿಪೇರಿಗೆ ಲಭ್ಯವಿರುವ ಅನುದಾನ ಬಳಸಿ, ಯಂತ್ರೋಪಕರಣಗಳನ್ನು ಸುಸ್ಥಿತಿಯಲ್ಲಿ ಇಡಬೇಕು’ ಎಂದು ತಿಳಿಸಿದ್ದಾರೆ. 

‘ಕೋವಿಡ್ ಪ್ರಕರಣಗಳು ಹೆಚ್ಚಾದಲ್ಲಿ ಪರಿಸ್ಥಿತಿ ನಿಭಾಯಿಸಲು ಆಸ್ಪತ್ರೆಗಳ ಸಿದ್ಧತೆಯನ್ನು ಖಚಿತ
ಪಡಿಸಿಕೊಳ್ಳಬೇಕು. ಇದೇ ತಿಂಗಳಾಂತ್ಯದೊಳಗೆ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳ ಅಣಕು ಪ್ರದರ್ಶನ ಪೂರ್ಣಗೊಳಿಸಬೇಕು’ ಎಂದು ಸೂಚಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.