ADVERTISEMENT

ಬಾಗಲಕೋಟೆ: ಕೋವಿಡ್-19 ಸೋಂಕು ಬಾಧಿತ ಆರೋಗ್ಯ ಇಲಾಖೆ ಸಿಬ್ಬಂದಿ ಸಾವು

​ಪ್ರಜಾವಾಣಿ ವಾರ್ತೆ
Published 29 ಜೂನ್ 2020, 5:02 IST
Last Updated 29 ಜೂನ್ 2020, 5:02 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬಾಗಲಕೋಟೆ: ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿಗೆ ಕೊರೊನಾ ವಾರಿಯರ್ ಬಲಿಯಾಗಿದ್ದಾರೆ.

ಗುಳೇದಗುಡ್ಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಡಿ ದಜೆ೯ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದ 60 ವರ್ಷದ ವ್ಯಕ್ತಿ ಭಾನುವಾರ ತಡರಾತ್ರಿ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಸಾವಿಗೀಡಾಗಿದ್ದಾರೆ.

ಇದರೊಂದಿಗೆ ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿತರ ಸಾವಿನ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ.

ADVERTISEMENT

ಗುಳೇದಗುಡ್ಡದ ವ್ಯಕ್ತಿಗೆ ಜೂನ್ 27ರಂದು ಸೋಂಕು ತಗುಲಿರುವುದು ದೃಢವಾಗಿತ್ತು. ಅವರಿಗೆ ನಿವೃತ್ತಿಗೆ ಇನ್ನೂ ಮೂರು ತಿಂಗಳು ಬಾಕಿ ಇತ್ತು. ಹೃದಯ ಸಂಬಂಧಿ, ಸಕ್ಕರೆ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ತೀವ್ರ ಉಸಿರಾಟದ ತೊಂದರೆಯ ಕಾರಣ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ನೌಕರನಿಗೆ ಸೋಂಕು ಹೇಗೆ ತಗುಲಿತು ಎನ್ನುವುದು ತನಿಖೆ ನಡೆದಿದೆ. ಸಮುದಾಯ ಆರೋಗ್ಯ ಕೇಂದ್ರ ಸೀಲ್‌ಡೌನ್ ಮಾಡಲಾಗಿದೆ ಎಂದು ಬಾಗಲಕೋಟೆ ಡಿಎಚ್ಒ ಡಾ.ಅನಂತ ದೇಸಾಯಿ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.