ADVERTISEMENT

ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಳ: ಚಾಲಕರಿಗೆ ಪರೀಕ್ಷಾ ವರದಿ ಕಡ್ಡಾಯ

​ಪ್ರಜಾವಾಣಿ ವಾರ್ತೆ
Published 7 ಮಾರ್ಚ್ 2021, 19:56 IST
Last Updated 7 ಮಾರ್ಚ್ 2021, 19:56 IST
   

ಬೆಂಗಳೂರು: ಕೇರಳ, ಮಹಾರಾಷ್ಟ್ರದಿಂದ ಬರುವ ಸರಕು ಸಾಗಣೆ ವಾಹನಗಳ ಚಾಲಕರು ಮತ್ತು ಸಹಾಯಕರು ಕಡ್ಡಾಯವಾಗಿ ಕೋವಿಡ್ ಆರ್‌ಟಿ– ಪಿಸಿಆರ್ ಪರೀಕ್ಷೆಯ ನೆಗೆಟಿವ್ ವರದಿ ಹೊಂದಿರಬೇಕು ಎಂದು ಆರೋಗ್ಯ ಇಲಾಖೆ ಸುತ್ತೋಲೆ ಹೊರಡಿಸಿದೆ.

ನೆರೆಯ ಈ ಎರಡೂ ರಾಜ್ಯಗಳಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಏರುತ್ತಿದೆ. ಈಗಾಗಲೇ ಗಡಿಯಲ್ಲಿ ಅಗತ್ಯ ಮುನ್ನೆಚ್ಚರಿಕೆ ವಹಿಸಲಾಗಿದೆ. ಅಲ್ಲಿಂದ ಬರುವ ಚಾಲಕರು, ಸಹಾಯಕರು 15 ದಿನಗಳಿಗೊಮ್ಮೆ ಆರ್‌ಟಿ–ಪಿಸಿಆರ್ ಪರೀಕ್ಷೆಗೆ ಒಳಪಡಬೇಕು.

ಅದೇ ರೀತಿ, ಪರೀಕ್ಷಾ ವರದಿಯನ್ನೂ ಅವರು ಹೊಂದಿರಬೇಕಾಗುತ್ತದೆ. ವರದಿ ಇಲ್ಲದಿದ್ದಲ್ಲಿ ರಾಜ್ಯಕ್ಕೆ ಬರಲು ಅವಕಾಶವಿಲ್ಲ. ಸೋಂಕು ನಿಯಂತ್ರಣಕ್ಕೆ ಸಂಬಂಧಿಸಿ ಅಧಿಕಾರಿಗಳು ಅಗತ್ಯ ಕ್ರಮಕೈಗೊಳ್ಳಬೇಕು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.