ADVERTISEMENT

ಅನಾರೋಗ್ಯ; ಮಗುವಿಗೆ ಎದೆ ಹಾಲು ಕುಡಿಸಲು ಆಗದ್ದಕ್ಕೆ ನೊಂದು ಮಹಿಳೆ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 26 ಡಿಸೆಂಬರ್ 2022, 6:52 IST
Last Updated 26 ಡಿಸೆಂಬರ್ 2022, 6:52 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ಬೆಂಗಳೂರು: ಅಪಾರ್ಟ್‌ಮೆಂಟ್‌ ಸಮುಚ್ಚಯವೊಂದರ 19ನೇ ಮಹಡಿಯಿಂದ ಜಿಗಿದು ಚರಿಸ್ಮಾ ಸಿಂಗ್ (40) ಎಂಬುವವರು ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಸಂಬಂಧ ತಲಘಟ್ಟಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

‘ಪೂರ್ವಾ ಹೈಲ್ಯಾಂಡ್ ಅಪಾರ್ಟ್‌ಮೆಂಟ್ ಸಮುಚ್ಚಯದಲ್ಲಿ ನೆಲೆಸಿದ್ದ ಚರಿಸ್ಮಾ, ಭಾನುವಾರ ಮಧ್ಯಾಹ್ನ ಆತ್ಮಹತ್ಯೆಗೆ ಶರಣಾಗಿದ್ದಾರೆ. ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಿಮ್ಸ್ ಆಸ್ಪತ್ರೆಗೆ ಸಾಗಿಸಲಾಗಿದೆ’ ಎಂದು ಪೊಲೀಸರು ಹೇಳಿದರು.

‘ಕೆಲ ವರ್ಷಗಳ ಹಿಂದೆಯಷ್ಟೇ ಮದುವೆಯಾಗಿದ್ದ ಚರಿಸ್ಮಾ, ಪತಿ ಜೊತೆ ಕೆನಡಾದಲ್ಲಿ ವಾಸವಿದ್ದರು. ಏಳು ತಿಂಗಳ ಹಿಂದೆಯಷ್ಟೇ ಅವರಿಗೆ ಮಗುವಾಗಿತ್ತು. ಆರೋಗ್ಯ ಸಮಸ್ಯೆಯಿಂದ ಮಗುವಿಗೆ ಎದೆ ಹಾಲು ಕುಡಿಸಲು ಸಾಧ್ಯವಾಗಿರಲಿಲ್ಲ. ಚಿಕಿತ್ಸೆ ಪಡೆಯಲೆಂದು ಇತ್ತೀಚೆಗಷ್ಟೇ ನಗರದಲ್ಲಿರುವ ತವರು ಮನೆಗೆ ಬಂದಿದ್ದರು.‘

ADVERTISEMENT

‘ಚಿಕಿತ್ಸೆ ಬಳಿಕವೂ ಎದೆ ಹಾಲು ಸಮಸ್ಯೆ ನಿವಾರಣೆ ಆಗಿರಲಿಲ್ಲ. ಭಾನುವಾರ ಎಲ್ಲರ ಕಣ್ತಪ್ಪಿಸಿ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕುಟುಂಬದವರ ಹೇಳಿಕೆ ಪಡೆದು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.