ADVERTISEMENT

ಆರೋಗ್ಯ ಸಚಿವ ಬಿ. ಶ್ರೀರಾಮುಲುಗೆ ಕೋವಿಡ್-19 ದೃಢ

​ಪ್ರಜಾವಾಣಿ ವಾರ್ತೆ
Published 9 ಆಗಸ್ಟ್ 2020, 12:15 IST
Last Updated 9 ಆಗಸ್ಟ್ 2020, 12:15 IST
ಆರೋಗ್ಯ ಸಚಿವ ಶ್ರೀರಾಮುಲು
ಆರೋಗ್ಯ ಸಚಿವ ಶ್ರೀರಾಮುಲು   

ಬೆಂಗಳೂರು: ಆರೋಗ್ಯ ಸಚಿವ ಶ್ರೀರಾಮುಲು ಅವರಿಗೆ ಕೋವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿದ್ದು, ಅವರೇ ಈ ವಿಚಾರವನ್ನು ಸ್ಪಷ್ಟಪಡಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಇಂದು ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪರೀಕ್ಷೆ ಮಾಡಿಸಿದಾಗ ಕೊರೊನ ಪಾಸಿಟಿವ್ ಬಂದಿದೆ. ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನನ್ನ ಇಲಾಖೆ ಸೇರಿದಂತೆ ಸರ್ಕಾರದ ಎಲ್ಲಾ ಇಲಾಖೆಗಳೂ ಜೀವದ ಹಂಗು ತೊರೆದು ಮಹಾಮಾರಿಯ ವಿರುದ್ಧ ಹಗಲಿರುಳೂ ಶ್ರಮಿಸುತ್ತಿವೆ ಎಂದಿದ್ದಾರೆ.

ಮತ್ತೊಂದು ಟ್ವೀಟ್‌ನಲ್ಲಿ, ಕೊರೊನ ಕಾಣಿಸಿಕೊಂಡ ಸಮಯದಿಂದಲೂ 30 ಜಿಲ್ಲೆಗಳಲ್ಲಿ ಪ್ರವಾಸ ಮಾಡಿ ಜನರಿಗೆ ಸೂಕ್ತ ಚಿಕಿತ್ಸೆ ಸಿಗುವಂತೆ ಮಾಡುವ ಸರ್ಕಾರದ ಆಶಯಕ್ಕೆ ತಕ್ಕಂತೆ ಕೆಲಸ ಮಾಡುತ್ತಿರುವ ಈ ಸಂದರ್ಭದಲ್ಲಿ ನನಗೆ ಸತ್ವಪರೀಕ್ಷೆಯ ಸಮಯ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯಲಿದ್ದೇನೆ ಎಂದು ತಿಳಿಸಿದ್ದಾರೆ.

ADVERTISEMENT

ಆದಷ್ಟೂ ಬೇಗ ಗುಣಮುಖನಾಗಿ ಸಂಕಷ್ಟದ ಸಮಯದಲ್ಲಿ ಇನ್ನಷ್ಟು ಜನಸೇವೆ ಮಾಡಲು ಶಕ್ತಿ ಕೊಡುವಂತೆ ಭಗವಂತನಲ್ಲಿ ಪ್ರಾರ್ಥಿಸುತ್ತೇನೆ. ಇತ್ತೀಚಿಗೆ ನನ್ನ ಸಂಪರ್ಕದಲ್ಲಿದ್ದ ಎಲ್ಲರೂ ಮುನ್ನೆಚ್ಚರಿಕೆ ಕ್ರಮ ವಹಿಸಲು ಕೋರುತ್ತೇನೆ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.