ADVERTISEMENT

ಕೋವಿಡ್‌ ಪ್ರಕರಣ ಹೆಚ್ಚಳ: ಎಚ್ಚರ ಅಗತ್ಯ ಎಂದ ಆರೋಗ್ಯ ಸಚಿವ ಸುಧಾಕರ್

​ಪ್ರಜಾವಾಣಿ ವಾರ್ತೆ
Published 11 ಮಾರ್ಚ್ 2021, 19:56 IST
Last Updated 11 ಮಾರ್ಚ್ 2021, 19:56 IST
ಡಾ.ಕೆ. ಸುಧಾಕರ್
ಡಾ.ಕೆ. ಸುಧಾಕರ್   

ಬೆಂಗಳೂರು: ‘ಪಕ್ಕದ ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚುತ್ತಿವೆ. ಇದು ರಾಜ್ಯಕ್ಕೆ ಎಚ್ಚರಿಕೆಯ ಗಂಟೆಯಾಗಿದ್ದು ಎಲ್ಲರೂ ಜಾಗರೂಕರಾಗಿರಬೇಕು’ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ‘ಹಬ್ಬದ ಸಂದರ್ಭಗಳಲ್ಲಿ, ಸಭೆ–ಸಮಾರಂಭಗಳಲ್ಲಿ ಕಡ್ಡಾಯವಾಗಿ ಮಾಸ್ಕ್‌ ಧರಿಸಬೇಕು. ಅಂತರವನ್ನು ಕಾಪಾಡಿಕೊಳ್ಳಬೇಕು ಹಾಗೂ ಜನಸಂದಣಿಯಿಂದ ದೂರವಿರಬೇಕು’ ಎಂದು ಸಲಹೆ ನೀಡಿದ್ದಾರೆ.

ಲಸಿಕೆ ಪಡೆಯಲು ಮುಂದಾಗಿ: ‘60 ವರ್ಷ ಮೇಲ್ಪಟ್ಟವರು, ಗಂಭೀರ ಕಾಯಿಲೆ ಇರುವ 45 ವರ್ಷ ಮೇಲ್ಪಟ್ಟು ಹೊಂದಿರುವವರು ತಪ್ಪದೇ ಆದಷ್ಟು ಬೇಗ ಕೊರೊನಾ ಲಸಿಕೆ ಪಡೆಯಬೇಕು’ ಎಂದೂ ಅವರು ಕೋರಿದ್ದಾರೆ.

ADVERTISEMENT

ನೆರೆಹೊರೆಯವರು, ಲಸಿಕೆ ಹಾಕಿಸುವಂತೆ ಅರಿವು ಮೂಡಿಸಿ ಎಂದೂ ಅವರು ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.