ADVERTISEMENT

ಆರೋಗ್ಯ ಸಚಿವ ಸುಧಾಕರ್‌ಗೆ ಕೋವಿಡ್

​ಪ್ರಜಾವಾಣಿ ವಾರ್ತೆ
Published 2 ಜೂನ್ 2022, 16:52 IST
Last Updated 2 ಜೂನ್ 2022, 16:52 IST
ಆರೋಗ್ಯ ಸಚಿವ ಸುಧಾಕರ್‌
ಆರೋಗ್ಯ ಸಚಿವ ಸುಧಾಕರ್‌   

ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ. ಸುಧಾಕರ್ ಅವರಿಗೆ ಕೋವಿಡ್ ದೃಢಪಟ್ಟಿದೆ.

ಈ ಸಂಬಂಧ ಅವರುಟ್ವೀಟ್ ಮೂಲಕಮಾಹಿತಿನೀಡಿದ್ದಾರೆ.

‘ಮೂರು ಅಲೆಗಳ ಸಂದರ್ಭದಲ್ಲೂ ಕೋವಿಡ್ ಸೋಂಕಿನಿಂದ ಪಾರಾಗಿದ್ದ ನಾನು ಈಗ ಸೋಂಕಿಗೆ ತುತ್ತಾಗಿದ್ದೇನೆ. ಸಣ್ಣ ಪ್ರಮಾಣದ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕೋವಿಡ್ ಪರೀಕ್ಷೆ ಮಾಡಿಸಿದಾಗ ಪಾಸಿಟಿವ್ ಆಗಿರುವುದು ಪತ್ತೆಯಾಗಿದೆ. ಕೆಲ ರೋಗ ಲಕ್ಷಣಗಳು ಕಾಣಿಸಿಕೊಂಡಿದ್ದು ಹೋಮ್ ಐಸೋಲೇಷನ್‌ನಲ್ಲಿ ಇದ್ದುಕೊಂಡೇ ಚಿಕಿತ್ಸೆ ಪಡೆಯುತ್ತಿದ್ದೇನೆ’ ಎಂದು ಹೇಳಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.