ADVERTISEMENT

ಆರೋಗ್ಯ ನೌಕರರಿಂದ ಶೋಷಣೆ ದಿನ ಆಚರಣೆ

​ಪ್ರಜಾವಾಣಿ ವಾರ್ತೆ
Published 1 ಏಪ್ರಿಲ್ 2022, 15:48 IST
Last Updated 1 ಏಪ್ರಿಲ್ 2022, 15:48 IST
ಒಂದು ದಿನದ ವಿರಾಮ ವಿರೋಧಿಸಿ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರು ಪ್ರತಿಭಟನೆ ನಡೆಸಿದರು.
ಒಂದು ದಿನದ ವಿರಾಮ ವಿರೋಧಿಸಿ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರು ಪ್ರತಿಭಟನೆ ನಡೆಸಿದರು.   

ಬೆಂಗಳೂರು: ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಆರೋಗ್ಯ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರು ಒಂದು ದಿನದ ವಿರಾಮ ವಿರೋಧಿಸಿ ಶುಕ್ರವಾರಶೋಷಣೆಯ ದಿನ ಆಚರಿಸಿದರು.

ಗುತ್ತಿಗೆ ನೌಕರರಿಗೆ ಪ್ರತಿ ವರ್ಷ ಏಪ್ರಿಲ್ 1ರಂದು ‘ಒಂದು ದಿನ ವಿರಾಮ’ ನೀಡುವ ಪದ್ಧತಿ ಜಾರಿಯಲ್ಲಿದೆ. ಇದನ್ನು ರದ್ದುಪಡಿಸುವಂತೆ ನೌಕರರು ಆಗ್ರಹಿಸಿದ್ದರು. ಆದರೆ, ಇಲಾಖೆ ಈ ಬಗ್ಗೆ ಕ್ರಮಕೈಗೊಳ್ಳದಿದ್ದರಿಂದಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಸಂಘದ ನೇತೃತ್ವದಲ್ಲಿ ನೌಕರರು ಪ್ರತಿಭಟನೆ ನಡೆಸಿದರು.

‘ನಿವೃತ್ತ ಐಎಎಸ್ ಅಧಿಕಾರಿ ಪಿ.ಎನ್. ಶ್ರೀನಿವಾಸಾಚಾರಿ ಅಧ್ಯಕ್ಷತೆಯ ಮಾನವ ಸಂಪನ್ಮೂಲ ಸಮಿತಿ ಸಲ್ಲಿಸಿದ್ದ ವರದಿಯನ್ನು ಆದಷ್ಟು ಶೀಘ್ರ ಸರ್ಕಾರ ಅನುಷ್ಠಾನಗೊಳಿಸಬೇಕು.ರಾಜ್ಯದಲ್ಲಿ 30 ಸಾವಿರಕ್ಕೂ ಅಧಿಕ ಮಂದಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಸೇವೆ ಸಲ್ಲಿಸುತ್ತಿದ್ದಾರೆ. ಸರ್ಕಾರ ಈಗಾಗಲೇ ಭರವಸೆ ನೀಡಿರುವುವಂತೆ ಶೇ 15 ರಷ್ಟು ಹೆಚ್ಚುವರಿ ವೇತನವನ್ನು ಪ್ರಸಕ್ತ ವರ್ಷದಿಂದಲೇ ಜಾರಿಗೆ ತರಬೇಕು. 4 ಸಾವಿರಕ್ಕೂ ಅಧಿಕ ನೌಕರರು 16 ವರ್ಷ ಹಾಗೂ ಅದಕ್ಕಿಂತ ಹೆಚ್ಚಿನ ಅವಧಿಗೆ ಸೇವೆ ಸಲ್ಲಿಸಿದ್ದಾರೆ. ಆದರೆ, ಈ ನೌಕರರಿಗೆ ಯಾವುದೇ ಸೇವಾ ಭದ್ರತೆ ಇಲ್ಲ’ ಎಂದು ಸಂಘದ ಅಧ್ಯಕ್ಷವಿಶ್ವರಾಧ್ಯ ಎಚ್. ಯಾಮೋಜಿ ತಿಳಿಸಿದರು.

ADVERTISEMENT

‘ಗುತ್ತಿಗೆ ನವೀಕರಣ ಸಂದರ್ಭದಲ್ಲಿ ನೌಕರರಿಗೆ ಬೆದರಿಕೆ ಹಾಕಿ, ಕೆಲಸ ಮಾಡಿಸಿಕೊಳ್ಳಲಾಗುತ್ತಿದೆ. ಗುತ್ತಿಗೆ ನೌಕರರಿಗೆ ಏ.1ರಂದು ಒಂದು ದಿನ ವಿರಾಮ ನೀಡುವ ಅನಿಷ್ಟ ಪದ್ಧತಿ ಜಾರಿಯಲ್ಲಿದೆ. ಸರ್ಕಾರ ಇದನ್ನು ರದ್ದುಪಡಿಸಬೇಕು’ ಎಂದು ಆಗ್ರಹಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.