ADVERTISEMENT

ಅತಿವೃಷ್ಠಿ ತಾಲ್ಲೂಕುಗಳ ಪಟ್ಟಿಗೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಸೇರ್ಪಡೆ

​ಪ್ರಜಾವಾಣಿ ವಾರ್ತೆ
Published 17 ಆಗಸ್ಟ್ 2021, 8:31 IST
Last Updated 17 ಆಗಸ್ಟ್ 2021, 8:31 IST
ಆರ್.‌ ಆಶೋಕ್
ಆರ್.‌ ಆಶೋಕ್   

ಬೆಂಗಳೂರು: ಅತಿವೃಷ್ಠಿ ಪೀಡಿತ ತಾಲ್ಲೂಕುಗಳ ಪಟ್ಟಿಗೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕನ್ನು ಸೇರಿಸಲಾಗಿದೆ.

ರಾಜ್ಯದ 13 ಜಿಲ್ಲೆಗಳ 61 ತಾಲ್ಲೂಕುಗಳನ್ನು ಪ್ರವಾಹ ಪೀಡಿತ ತಾಲ್ಲೂಕುಗಳೆಂದು ಈ ಹಿಂದೆ ಘೋಷಣೆ ಮಾಡಲಾಗಿತ್ತು. ಇದೀಗ ಹೆಚ್ಚುವರಿಯಾಗಿ ಮತ್ತೆ 22 ತಾಲ್ಲೂಕುಗಳನ್ನು ಈ ಪಟ್ಟಿಯಲ್ಲಿ ಸೇರಿಸಗೊಳಿಸಲಾಗಿದೆ.

ತಮ್ಮ ಕ್ಷೇತ್ರವನ್ನು ಅತಿವೃಷ್ಠಿ ಪಟ್ಟಿಯಲ್ಲಿ ಸೇರಿಸುವಂತೆ ಆಗ್ರಹಿಸಿ ಬಿಜೆಪಿ ಶಾಸಕ ಎಂ.ಪಿ. ಕುಮಾರಸ್ವಾಮಿ ವಿಧಾನಸೌಧದ ಗಾಂಧಿ ಪ್ರತಿಮೆ ಎದುರು ಇತ್ತೀಚೆಗೆ ಪ್ರತಿಭಟನೆ ನಡೆಸಿದ್ದರು. ಆಗ ಸ್ಥಳಕ್ಕೆ ಬಂದಿದ್ದ ಸಚಿವ ಆರ್.‌ಅಶೋಕ ಮುಂದೆ ಕಣ್ಣೀರು ಹಾಕಿದ್ದರು.

ADVERTISEMENT

ಈ ಸಂದರ್ಭದಲ್ಲಿ ತಾಲ್ಲೂಕನ್ನು ಅತಿವೃಷ್ಠಿ ಪಟ್ಟಿಯಲ್ಲಿ ಸೇರ್ಪಡೆಗೊಳಿಸುವ ಭರವಸೆಯನ್ನು ಅಶೋಕ ನೀಡಿದ್ದರು.‌ ಅದರಂತೆ ಇದೀಗ ಬಿಡುಗಡೆಗೊಳಿಸಿರುವ ಹೆಚ್ಚುವರಿ ತಾಲ್ಲೂಕುಗಳ ಪಟ್ಟಿಯಲ್ಲಿ ಮೂಡಿಗೆರೆ ತಾಲ್ಲೂಕನ್ನು ಸೇರಿಸಲಾಗಿದೆ.

ಹೊಸತಾಗಿ ಸೇರಿಸಿದ 22 ತಾಲ್ಲೂಕುಗಳು: ಬೆಳಗಾವಿ, ಚಿಕ್ಕಮಗಳೂರು, ಹುಬ್ಬಳ್ಳಿ‌ನಗರ, ಕಡೂರು, ದಾವಣಗೆರೆ, ದಾಂಡೇಲಿ, ಆಲೂರು, ಲಕ್ಷ್ಮೇಶ್ವರ, ತರೀಕೆರೆ, ಮುಂಡಗೋಡು, ಸೂಪ, ಹುಬ್ಬಳ್ಳಿ, ಭದ್ರಾವತಿ, ಚೆನ್ನಗಿರಿ, ಅಣ್ಣಿಗೇರಿ, ಬಬಲೇಶ್ವರ, ನಿಡಗುಂದಿ, ಕೋಲ್ಹಾರ, ಮುದ್ದೆಬಿಹಾಳ, ಹರಪಮಹಳ್ಳಿ, ಹೊಸನಗರ, ಮೂಡಿಗೆರೆ ತಾಲ್ಲೂಕುಗಳನ್ನು ಈ ಪಟ್ಟಿಯಲ್ಲಿ ಸೇರಿಸಲಾಗಿದೆ.

ಈ ಬಗ್ಗೆ ಮಾತನಾಡಿದ ಸಚಿವ ಅಶೋಕ್, 61 ತಾಲ್ಲೂಕುಗಳನ್ನು ಪ್ರವಾಹ ಪೀಡಿತ ತಾಲ್ಲೂಕುಗಳೆಂದು ಈ ಹಿಂದೆ ಘೋಷಣೆ ಮಾಡಲಾಗಿತ್ತು. ಮಳೆ ಹೆಚ್ಚಾಗಿ ಮತ್ತೆ ಹಾನಿ ಉಂಟಾಗಿದೆ. ಹೀಗಾಗಿ ಹೊಸತಾಗಿ 22 ತಾಲ್ಲೂಕುಗಳನ್ನು ಪ್ರವಾಹ ಪೀಡಿತ ತಾಲ್ಲೂಕುಗಳೆಂದು ಘೋಷಿಸಲಾಗಿದೆ ಎಂದರು.

ಬೆಂಗಳೂರು ನಗರದಲ್ಲೂ 50 ಕ್ಕೂ ಹೆಚ್ವು ರಸ್ತೆಗಳಲ್ಲಿ ನೀರು ನಿಲ್ಲುತ್ತಿದೆ. ಇದನ್ನು ಗುರುತಿಲಾಗಿದ್ದು ತುರ್ತು ಕಾಮಗಾರಿ ನಡೆಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.