ADVERTISEMENT

ಹೊಳಲ್ಕೆರೆ: ಕುಸಿದ ದೇಗುಲದಲ್ಲಿ ರಂಗನಾಥಸ್ವಾಮಿಗೆ ಪೂಜೆ

​ಪ್ರಜಾವಾಣಿ ವಾರ್ತೆ
Published 26 ಅಕ್ಟೋಬರ್ 2019, 17:33 IST
Last Updated 26 ಅಕ್ಟೋಬರ್ 2019, 17:33 IST
ಹೊಳಲ್ಕೆರೆ ತಾಲ್ಲೂಕಿನ ಲೋಕದೊಳಲಿನಲ್ಲಿ ಭಾರಿ ಮಳೆಗೆ ಕುಸಿದು ಅಪಾಯಕಾರಿ ಸ್ಥಿತಿಯಲ್ಲಿರುವ ದೊಡ್ಡಹೊಟ್ಟೆ ರಂಗನಾಥಸ್ವಾಮಿ ಬೆಟ್ಟದಲ್ಲಿ ಅರ್ಚಕರೊಬ್ಬರು ಹಗ್ಗ ಕಟ್ಟಿಕೊಂಡು ದೇವರಿಗೆ ಪೂಜೆ ಸಲ್ಲಿಸಿದರು.
ಹೊಳಲ್ಕೆರೆ ತಾಲ್ಲೂಕಿನ ಲೋಕದೊಳಲಿನಲ್ಲಿ ಭಾರಿ ಮಳೆಗೆ ಕುಸಿದು ಅಪಾಯಕಾರಿ ಸ್ಥಿತಿಯಲ್ಲಿರುವ ದೊಡ್ಡಹೊಟ್ಟೆ ರಂಗನಾಥಸ್ವಾಮಿ ಬೆಟ್ಟದಲ್ಲಿ ಅರ್ಚಕರೊಬ್ಬರು ಹಗ್ಗ ಕಟ್ಟಿಕೊಂಡು ದೇವರಿಗೆ ಪೂಜೆ ಸಲ್ಲಿಸಿದರು.   

ಹೊಳಲ್ಕೆರೆ: ತಾಲ್ಲೂಕಿನ ಲೋಕದೊಳಲಿನಲ್ಲಿ ಭಾರಿ ಮಳೆಗೆ ಕುಸಿದು ಅಪಾಯಕಾರಿ ಸ್ಥಿತಿಯಲ್ಲಿರುವ ದೊಡ್ಡಹೊಟ್ಟೆ ರಂಗನಾಥಸ್ವಾಮಿ ಬೆಟ್ಟದಲ್ಲಿ ಅರ್ಚಕರೊಬ್ಬರು ಹಗ್ಗ ಕಟ್ಟಿಕೊಂಡು ದೇವರಿಗೆ ಪೂಜಾ ಕೈಂಕರ್ಯ ನೆರವೇರಿಸಿದ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಸುಮಾರು ಎರಡು ಸಾವಿರ ಅಡಿ ಎತ್ತರದ ಬೆಟ್ಟದ ತುದಿಯಲ್ಲಿ ರಂಗನಾಥಸ್ವಾಮಿ ದೇಗುಲವಿದೆ. ಕಳೆದ ವಾರ ಸುರಿದ ಮಳೆಗೆ ಬೆಟ್ಟ ಕುಸಿದಿತ್ತು. ಗರ್ಭಗುಡಿ ಹೊರತುಪಡಿಸಿ ದೇಗುಲಕ್ಕೆ ಧಕ್ಕೆಯಾಗಿತ್ತು. ಬೆಟ್ಟ ಕುಸಿದಿದ್ದರಿಂದ ದೇಗುಲಕ್ಕೆ ತೆರಳುವುದು ಅಸಾಧ್ಯವಾಗಿತ್ತು. ಅರ್ಚಕ ಸೇರಿ ಐದಾರು ಗ್ರಾಮಸ್ಥರು ಶನಿವಾರ ಬೆಟ್ಟ ಏರಿದ್ದರು.

ಅರ್ಚಕರು ಸೊಂಟಕ್ಕೆ ಹಗ್ಗ ಕಟ್ಟಿಕೊಂಡು ಗರ್ಭಗುಡಿ ಪ್ರವೇಶಿಸಿ ಪೂಜೆ ಮಾಡಿದ್ದಾರೆ. ಮತ್ತೊಬ್ಬರು ಹಗ್ಗದ ತುದಿ ಹಿಡಿದು ಸುರಕ್ಷಿತ ಸ್ಥಳದಲ್ಲಿ ನಿಂತಿದ್ದಾರೆ. ಇನ್ನೊಬ್ಬರು ಸೂಕ್ಷ್ಮವಾಗಿ ಇದನ್ನು ಗಮನಿಸುತ್ತಿದ್ದಾರೆ. ಇನ್ನೊಬ್ಬರು ಜಾಗಟೆ ಬಾರಿಸುತ್ತಿದ್ದಾರೆ. ಯಾವುದೇ ವಿಘ್ನವಿಲ್ಲದೆ ಪೂಜಾ ಕೈಂಕರ್ಯ ನೆರವೇರಿಸಿದ ದೃಶ್ಯವನ್ನು ಮೊಬೈಲ್‌ನಲ್ಲಿ ಸೆರೆ ಹಿಡಿಯಲಾಗಿದೆ. ಅರ್ಚಕರ ಸಾಹಸಕ್ಕೆ ಸಾಮಾಜಿಕ ಜಾಲತಾಣದಲ್ಲಿ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.