ADVERTISEMENT

ಇಂದು ರಾಜ್ಯದ ಕೆಲವೆಡೆ ಭಾರಿ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ

​ಪ್ರಜಾವಾಣಿ ವಾರ್ತೆ
Published 28 ಸೆಪ್ಟೆಂಬರ್ 2025, 0:30 IST
Last Updated 28 ಸೆಪ್ಟೆಂಬರ್ 2025, 0:30 IST
   

ಬೆಂಗಳೂರು: ಕರಾವಳಿ ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳ ಕೆಲವೆಡೆ ಭಾನುವಾರ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 

ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಯ ಒಂದೆರಡು ಸ್ಥಳಗಳಲ್ಲಿ ಭಾರಿ ಮಳೆಯಾಗುವ ಸಂಭವವಿದೆ. ಉತ್ತರ ಒಳನಾಡಿನ ಕಲಬುರಗಿ, ಯಾದಗಿರಿ, ವಿಜಯಪುರ, ಬೆಳಗಾವಿ ಮತ್ತು ಬಾಗಲಕೋಟೆ ಜಿಲ್ಲೆಯ ಒಂದೆರಡು ಸ್ಥಳಗಳಲ್ಲಿ ಗಂಟೆಗೆ 30ರಿಂದ 40 ಕಿ.ಮೀ ವೇಗದಲ್ಲಿ ಗಾಳಿಯೊಂದಿಗೆ, ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ. 

ಬೀದರ್, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು ಜಿಲ್ಲೆಯ ಹಲವೆಡೆ ಬಿರುಗಾಳಿ ಸಹಿತ ಸಾಧಾರಣ ಮಳೆಯಾಗುವ ಸಂಭವವಿದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಯ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ. 

ADVERTISEMENT

ಸೋಮವಾರದಿಂದ ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿಯೂ ಸಾಧಾರಣ ಮಳೆಯಾಗಲಿದ್ದು, ರಾಜ್ಯದ ವಿವಿಧೆಡೆ ಅ.3ರವರೆಗೂ ಮಳೆ ಮುಂದುವರಿಯಲಿದೆ ಎಂದು ಇಲಾಖೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.