ಬೆಳಗಾವಿ: ಜಿಲ್ಲೆಯ ಹಲವೆಡೆಧಾರಾಕಾರ ಮಳೆಯಾಗುತ್ತಿದ್ದು,ನದಿಗಳು ಉಕ್ಕಿ ಹರಿಯುತ್ತಿವೆ.ರಾಮದುರ್ಗ ತಾಲ್ಲೂಕು ಹೊರತುಪಡಿಸಿ ಬೆಳಗಾವಿ ಹಾಗೂ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಗಳ ಎಲ್ಲ ಸರ್ಕಾರಿಅನುದಾನಿತ ಹಾಗೂ ಅನುದಾನರಹಿತ ಶಾಲೆಗಳಿಗೆ ಆ. 6 ಮತ್ತು 7ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ.ಎಸ್.ಬಿ. ಬೊಮ್ಮನಹಳ್ಳಿ ಸೋಮವಾರ ಆದೇಶ ಹೊರಡಿಸಿದ್ದಾರೆ.
ಮುಂಬರುವ ಭಾನುವಾರಗಳಂದು ಶಾಲೆಗಳನ್ನು ನಡೆಸಿ, ಬೋಧನಾ–ಕಲಿಕಾ ಅವಧಿಯನ್ನು ಸರಿದೂಗಿಸಿಕೊಳ್ಳಬೇಕು ಎಂದು ಆದೇಶಿಸಿದ್ದಾರೆ.
ಶಿರಸಿ: ಶಿರಸಿ ಉಪವಿಭಾಗ ವ್ಯಾಪ್ತಿಯ ಶಿರಸಿ, ಸಿದ್ದಾಪುರ, ಯಲ್ಲಾಪುರದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಕಾರಣ ಮಂಗಳವಾರ (ಆ.6) ಈ ಮೂರು ತಾಲ್ಲೂಕುಗಳ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.