ADVERTISEMENT

ಧಾರವಾಡದಲ್ಲಿ ಭಾರಿ ಮಳೆ: ನಡುಗಡ್ಡೆಯಲ್ಲಿ ಸಿಲುಕಿದ 9 ಕಾರ್ಮಿಕರು

ಸ್ಥಳದಲ್ಲೇ ಬೀಡು ಬಿಟ್ಟು ರಕ್ಷಣಾ ಕಾರ್ಯಚರಣೆ ಉಸ್ತುವಾರಿ ವಹಿಸಿಕೊಂಡ ತಹಸೀಲ್ದಾರ್‌

​ಪ್ರಜಾವಾಣಿ ವಾರ್ತೆ
Published 21 ಅಕ್ಟೋಬರ್ 2019, 5:47 IST
Last Updated 21 ಅಕ್ಟೋಬರ್ 2019, 5:47 IST
   

ಧಾರವಾಡ: ಭಾನುವಾರ ರಾತ್ರಿ ಹುಬ್ಬಳ್ಳಿ–ಧಾರವಾಡದಲ್ಲಿ ಕುಂಭದ್ರೋಣ ಮಳೆ ಸುರಿದಿದ್ದು, ಹಲವು ಪ್ರದೇಶಗಳು ಜಲಾವೃತಗೊಂಡಿವೆ. ಹುಬ್ಬಳ್ಳಿ ತಾಲೂಕಿನ ಇಂಗಳಹಳ್ಳಿ ಹಾಗೂ ಶಿಶುವಿನಹಳ್ಳಿ ನಡುವಿನ ಸೇತುವೆ ಕಾಮಗಾರಿಯ ಕೆಲಸ ನಿರ್ವಹಿಸುತ್ತಿದ್ದ 9 ಜನ ಕಾರ್ಮಿಕರು ಹಳ್ಳದ ಮಧ್ಯ ಸಿಲುಕಿದ್ದು, ಅವರ ರಕ್ಷಣೆಗಾಗಿ ಕಾರ್ಯಚರಣೆ ಆರಂಭವಾಗಿದೆ.

ನಡುಗಡ್ಡೆಯಲ್ಲಿ ಸಿಲುಕಿರುವ 9 ಮಂದಿಯೂ ಸೇತುವೆ ನಿರ್ಮಾಣ ಕಾರ್ಯದಲ್ಲಿ ತೊಡಗಿದ್ದರು. ಅವರು ತಂಗಿದ್ದ ಶೆಡ್‌ಗಳ ಸುತ್ತಲೂ ಮಳೆಯಿಂದಾಗಿ ಭಾರಿ ಪ್ರಮಾಣದಲ್ಲಿ ನೀರು ಆವೃತವಾಗಿದೆ. ಸದ್ಯ ಅವರ ರಕ್ಷಣಾ ಕಾರ್ಯಚರಣೆ ಆರಂಭವಾಗಿದೆ.

ಹುಬ್ಬಳ್ಳಿ ಗ್ರಾಮೀಣ ತಹಶಿಲ್ದಾರರ ಪ್ರಕಾಶ್ ನಾಸಿ ಸ್ಥಳದಲ್ಲೇ ಇದ್ದು, ರಕ್ಷಣಾ ಕಾರ್ಯದ ಮೇಲುಸ್ತುವಾರಿ ನೋಡಿಕೊಳ್ಳುತ್ತಿದ್ದಾರೆ.

ADVERTISEMENT

ಜಲಾವೃತ ಪ್ರದೇಶಗಳಿಗೆ ಸಚಿವ ಶೆಟ್ಟರ್‌ಭೇಟಿ

ಮಳೆಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್‌ಸೋಮವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಶಾಸಕ ಅಮೃತ ದೇಸಾಯಿ, ಜಿಲ್ಲಾಧಿಕಾರಿ ದೀಪಾ ಚೋಳನ್‌ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದು, ಮಳೆಹಾನಿ ಮತ್ತು ಮುಂಚಿತವಾಗಿ ಕೈಗೊಂಡ ಮುಂಜಾಗ್ರತಾ ಕ್ರಮಗಳು, ಪರಿಹಾರ ವಿತರಣೆ ಕುರಿತು ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.