ADVERTISEMENT

9 ಜಿಲ್ಲೆಗಳಲ್ಲಿ ಇಂದು ಭಾರಿ ಮಳೆ ಸಾಧ್ಯತೆ

​ಪ್ರಜಾವಾಣಿ ವಾರ್ತೆ
Published 29 ಅಕ್ಟೋಬರ್ 2019, 18:48 IST
Last Updated 29 ಅಕ್ಟೋಬರ್ 2019, 18:48 IST

ಬೆಂಗಳೂರು: ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಚಿತ್ರದುರ್ಗ ಜಿಲ್ಲೆಗಳಲ್ಲಿಅಕ್ಟೋಬರ್ 30ರಂದುಗುಡುಗು, ಸಿಡಿಲು ಸಹಿತ ಭಾರಿ ಮಳೆ ಸುರಿಯುವ ಸಾಧ್ಯತೆ ಇದೆ. ಹೀಗಾಗಿ ಬುಧವಾರ ಈ ಜಿಲ್ಲೆಗಳಲ್ಲಿ ‘ಯೆಲ್ಲೊ ಅಲರ್ಟ್‌’ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ನವೆಂಬರ್‌ 1ರವರೆಗೆರಾಜ್ಯದ ಕರಾವಳಿ ಭಾಗದಲ್ಲಿ ಗಂಟೆಗೆ 70ರಿಂದ 80 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದ್ದು, 2.5ರಿಂದ 2.7 ಮೀಟರ್‌ನಷ್ಟು ಎತ್ತರದ ಅಲೆಗಳೂ ಏಳಲಿವೆ. ಹೀಗಾಗಿ ಮೀನುಗಾರರು ಕಡಲಿಗೆ ಇಳಿಯ
ಬಾರದು ಎಂದು ಇಲಾಖೆ ಸೂಚಿಸಿದೆ.

ಮಂಗಳವಾರ ಚಿಕ್ಕಮಗಳೂರು ಜಿಲ್ಲೆಯ ಕಡೂರು ಹಾಗೂ ಶಿವಮೊಗ್ಗ ಜಿಲ್ಲೆಯ ಆಗುಂಬೆಯಲ್ಲಿ ತಲಾ 3 ಸೆಂ.ಮೀ ಮಳೆಯಾಗಿದೆ. ಸಿದ್ದಾಪುರ, ಕದ್ರಾ, ನುಗ್ಗೇಹಳ್ಳಿ, ಚಿಕ್ಕಮಗಳೂರು, ಕುಷ್ಟಗಿಯಲ್ಲಿ ತಲಾ 1ಸೆಂ.ಮೀ. ಮಳೆಯಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.