ADVERTISEMENT

ಕರಾವಳಿಯಲ್ಲಿ ಮುಂದುವರಿದ ಮಳೆ

​ಪ್ರಜಾವಾಣಿ ವಾರ್ತೆ
Published 12 ಸೆಪ್ಟೆಂಬರ್ 2020, 17:27 IST
Last Updated 12 ಸೆಪ್ಟೆಂಬರ್ 2020, 17:27 IST
ಅಫಜಲಪುರ ತಾಲ್ಲೂಕಿನ ಬಳೂರ್ಗಿ ಗ್ರಾಮದ ಲಕ್ಷಪ್ಪ ಯಳಗೋಳ ಅವರ ಬಾಳೆ ತೋಟದಲ್ಲಿ ನೀರು ನಿಂತಿರುವುದು
ಅಫಜಲಪುರ ತಾಲ್ಲೂಕಿನ ಬಳೂರ್ಗಿ ಗ್ರಾಮದ ಲಕ್ಷಪ್ಪ ಯಳಗೋಳ ಅವರ ಬಾಳೆ ತೋಟದಲ್ಲಿ ನೀರು ನಿಂತಿರುವುದು   

ಬೆಂಗಳೂರು: ಕರವಾಳಿಯಲ್ಲಿ ಸತತ ಮೂರನೇ ದಿನವೂ ವರುಣನ ಅಬ್ಬರ ಮುಂದುವರಿದಿದೆ. ಕೊಡಗಿನಲ್ಲಿ ಧಾರಾಕಾರವಾಗಿ ಸುರಿದಿದ್ದರೆ, ಕಲ್ಯಾಣ ಕರ್ನಾಟಕ ಭಾಗದ ಕೆಲವೆಡೆ ಉತ್ತಮ ಮಳೆ ಆಗಿದೆ. ರಾಜ್ಯದ ಉಳಿದ ಭಾಗದಲ್ಲಿ ಸಾಧಾರಣವಾಗಿ ಸುರಿದಿದೆ. ಉಡುಪಿ ಜಿಲ್ಲೆಯ ಕುಂದಾಪುರ ತಾಲ್ಲೂಕಿನ ಬಳ್ಕೂರಿನಲ್ಲಿ ಗರಿಷ್ಠ 20.9 ಸೆಂ.ಮೀ. ಮಳೆ ಬಿದ್ದಿದೆ. ಕೊಡಗು ಜಿಲ್ಲೆಯಾದ್ಯಂತ ಮತ್ತೆ ಧಾರಾಕಾರ ಮಳೆ ಸುರಿಯುತ್ತಿದೆ. ಭಾಗಮಂಡಲದ ತ್ರಿವೇಣಿ ಸಂಗಮದಲ್ಲಿ ನೀರಿನಮಟ್ಟ ಏರಿಕೆಯಾಗಿದೆ.

ಕಲಬುರ್ಗಿ ಜಿಲ್ಲೆಯ ‌ಅಫಜಲಪುರ,ಕೊಪ್ಪಳ ನಗರ ಹಾಗೂ ಹಿಟ್ನಾಳ, ಮುನಿರಾಬಾದ್ ಹೋಬಳಿ, ರಾಯಚೂರಿನ ಮಾನ್ವಿ, ಕವಿತಾಳ ಮತ್ತು ಸಿರವಾರದಲ್ಲಿ ಉತ್ತಮ ಮಳೆಯಾಗಿದೆ. ಧಾರವಾಡ, ಹಾವೇರಿ, ಬೆಳಗಾವಿ, ಗದಗ, ಉತ್ತರ ಕನ್ನಡ, ಶಿವಮೊಗ್ಗ, ದಾವಣಗೆರೆ ಜಿಲ್ಲೆಯಲ್ಲಿ ಸಾಧಾರಣ ಮಳೆ ಆಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT