ADVERTISEMENT

ಕೊಡಗು, ಹಾಸನ ಜಿಲ್ಲೆಯಲ್ಲಿ ಉತ್ತಮ ಮಳೆ

​ಪ್ರಜಾವಾಣಿ ವಾರ್ತೆ
Published 21 ಏಪ್ರಿಲ್ 2021, 18:23 IST
Last Updated 21 ಏಪ್ರಿಲ್ 2021, 18:23 IST
ಕೊಡಗು ಜಿಲ್ಲೆಯ ಬೇತು ಗ್ರಾಮದಲ್ಲಿ ಬುಧವಾರ ಸುರಿದ ಮಳೆ
ಕೊಡಗು ಜಿಲ್ಲೆಯ ಬೇತು ಗ್ರಾಮದಲ್ಲಿ ಬುಧವಾರ ಸುರಿದ ಮಳೆ   

ಮಡಿಕೇರಿ/ಹಾಸನ: ಕೊಡಗು ಜಿಲ್ಲೆಯಾದ್ಯಂತ ಬುಧವಾರ ಧಾರಾಕಾರ ಮಳೆಯಾಗಿದೆ.

ಸುಂಟಿಕೊಪ್ಪ, ಸಿದ್ದಾಪುರ, ಪೊನ್ನಂಪೇಟೆ, ನಾಪೋಕ್ಲು, ಭಾಗಮಂಡಲ, ತಲಕಾವೇರಿ ಹಾಗೂ ಮಡಿಕೇರಿ ಸುತ್ತಮುತ್ತ ಗುಡುಗುಸಹಿತ ಅರ್ಧ ಗಂಟೆ ಮಳೆಯಾಯಿತು.

ಗೋಣಿಕೊಪ್ಪಲು ವ್ಯಾಪ್ತಿಯಲ್ಲಿ ಗಾಳಿಸಹಿತ ಜೋರು ಮಳೆಯಾಗಿದ್ದು, ಗ್ರಾಮೀಣ ಪ್ರದೇಶದ ಅಲ್ಲಲ್ಲಿ ವಿದ್ಯುತ್‌ ಕಂಬಗಳು ಧರೆಗುರುಳಿದ್ದು, ವಿದ್ಯುತ್‌ ವ್ಯತ್ಯಯವಾಗಿದೆ.

ADVERTISEMENT

ಹಾಸನ ನಗರ ಸೇರಿದಂತೆ ಜಿಲ್ಲೆಯ ವಿವಿಧೆಡೆ ಸುಮಾರು ಒಂದು ತಾಸು ಗುಡುಗು ಸಹಿತ ಉತ್ತಮ ಮಳೆಯಾಗಿದೆ. ಸಕಲೇಶಪುರ ತಾಲ್ಲೂಕಿನ ಯಸಳೂರು ಭಾಗದಲ್ಲಿ ಮನೆ ಹೆಂಚುಗಳು ಹಾರಿ ಹೋಗಿವೆ. ವಡೂರು ಗ್ರಾಮದಲ್ಲಿ ಸಿಡಿಲು ಬಡಿದು ಹಸು ಮೃತಪಟ್ಟಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.