ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ ಮುಂದುವರಿದಿದ್ದು ಕಾವೇರಿ ನದಿಯೂ ಸೇರಿದಂತೆ ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿವೆ.
ಹಾರಂಗಿ ಜಲಾನಯನ ಪ್ರದೇಶದಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದೆ. ಹಾರಂಗಿ ಜಲಾಶಯದ ಒಳಹರಿವು 5,819 ಕ್ಯುಸೆಕ್‌ಗೆ ಏರಿಕೆಯಾಗಿದ್ದು, ನದಿಗೆ 6,300 ಕ್ಯುಸೆಕ್ ನೀರು ಹರಿಸಲಾಗುತ್ತಿದೆ. ಮಡಿಕೇರಿ, ಭಾಗಮಂಡಲ, ನಾಪೋಕ್ಲು, ತಲಕಾವೇರಿ ಭಾಗದಲ್ಲೂ ಜೋರು ಮಳೆಯಾಗುತ್ತಿದೆ. ಜಿಲ್ಲೆಯ ಕೆಲವು ಪ್ರದೇಶಗಳಲ್ಲಿ ಪ್ರವಾಹದ ಆತಂಕ ಎದುರಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.