ADVERTISEMENT

ಮಲೆನಾಡಿನಲ್ಲಿ ಉತ್ತಮ ಮಳೆ

​ಪ್ರಜಾವಾಣಿ ವಾರ್ತೆ
Published 10 ಏಪ್ರಿಲ್ 2020, 20:15 IST
Last Updated 10 ಏಪ್ರಿಲ್ 2020, 20:15 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡು ಭಾಗದಲ್ಲಿ ಶುಕ್ರವಾರ ಉತ್ತಮ ಮಳೆಯಾಗಿದೆ. ಕೊಪ್ಪ, ಕಳಸ ಮತ್ತು ಶೃಂಗೇರಿ ತಾಲ್ಲೂಕಿನಲ್ಲಿ ಗುಡುಗು ಸಹಿತ ಮಳೆಯಾಗಿದೆ.

ಬೆಳ್ತಂಗಡಿ ವರದಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲ್ಲೂಕಿನ ಸುತ್ತಮುತ್ತ ಶುಕ್ರವಾರ ಸಂಜೆ ಗಾಳಿ ಸಹಿತ ಉತ್ತಮ ಮಳೆಯಾಗಿದೆ.

ನಾರಾವಿ, ಕುತ್ಲೂರು, ಪಿಲ್ಯ, ಅಳದಂಗಡಿ, ಶಿರ್ಲಾಲ್ ಭಾಗದಲ್ಲಿ ಉತ್ತಮ ಮಳೆಯಾದರೆ, ಬೆಳ್ತಂಗಡಿ, ಗುರುವಾಯನಕೆರೆ ಭಾಗದಲ್ಲಿ ತುಂತುರು ಮಳೆಯಾಗಿದೆ.

ADVERTISEMENT

ಗುಡುಗು ಸಹಿತ ಮಳೆ: ಶಿವಮೊಗ್ಗ ಜಿಲ್ಲೆಯ ಸೊರಬ, ಶಿಕಾರಿಪುರ, ಹೊಸನಗರ, ಭದ್ರಾವತಿ ತಾಲ್ಲೂಕಿನ ಹಲವೆಡೆ ಶುಕ್ರವಾರ ಗುಡುಗು ಸಹಿತ ಸಾಧಾರಣ ಮಳೆಯಾಗಿದೆ.

ಸಾಗರ ತಾಲ್ಲೂಕಿನ ವಿವಿಧೆಡೆ ಗುಡುಗು ಸಮೇತ ಸಾಧಾರಣ ಮಳೆಯಾಗಿದೆ. ತೆರವಿನಕೊಪ್ಪ ಹಾಗೂ ಸುತ್ತಮುತ್ತಲ ಗ್ರಾಮಗಳಲ್ಲಿ ಆಲಿಕಲ್ಲು ಸಮೇತ ಮಳೆಯಾಗಿದೆ. ಶಿವಮೊಗ್ಗ ಸೇರಿದಂತೆ ಕೆಲವೆಡೆ ದಿನವಿಡೀ ಮೋಡ ಕವಿದ ವಾತಾವರಣವಿತ್ತು.

ವಿವಿಧೆಡೆ ಮಳೆ: ಶಿರಸಿ, ಬೆಳಗಾವಿ, ವಿಜಯಪುರ ಜಿಲ್ಲೆಯ ಹಲವೆಡೆ ಶುಕ್ರವಾರ ಕೆಲ ಸಮಯ ಮಳೆಯಾಗಿದೆ.

ಮೈಸೂರು ನಗರ ಹಾಗೂ ಮಂಡ್ಯ ಜಿಲ್ಲೆಯ ವಿವಿಧೆಡೆಯೂ ಗುರುವಾರ ರಾತ್ರಿ ಧಾರಾಕಾರ ಮಳೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.