ADVERTISEMENT

ರಾಜ್ಯದಲ್ಲಿ ಎರಡು ದಿನ ಭಾರಿ ಮಳೆ ಸಾಧ್ಯತೆ

​ಪ್ರಜಾವಾಣಿ ವಾರ್ತೆ
Published 15 ಆಗಸ್ಟ್ 2024, 16:12 IST
Last Updated 15 ಆಗಸ್ಟ್ 2024, 16:12 IST
<div class="paragraphs"><p>ಪ್ರಾತಿನಿಧಿಕ ಚಿತ್ರ</p></div>

ಪ್ರಾತಿನಿಧಿಕ ಚಿತ್ರ

   

ಬೆಂಗಳೂರು: ರಾಜ್ಯದ ಮಲೆನಾಡು, ಕರಾವಳಿ ಹಾಗೂ ಉತ್ತರ ಒಳನಾಡು ಭಾಗದ ಹಲವು ಜಿಲ್ಲೆಗಳಲ್ಲಿ ಶುಕ್ರವಾರ ಮತ್ತು ಶನಿವಾರ ಗುಡುಗು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಶುಕ್ರವಾರ ಶಿವಮೊಗ್ಗ, ಚಿಕ್ಕಮಗಳೂರು, ಚಿತ್ರದುರ್ಗ ಹಾಗೂ ದಾವಣಗೆರೆ ಜಿಲ್ಲೆಗಳಿಗೆ ‘ಆರೆಂಜ್‌ ಅಲರ್ಟ್‌’ ನೀಡಲಾಗಿದೆ. ಯಾದಗಿರಿ, ರಾಯಚೂರು, ಕೊಪ್ಪಳ, ಗದಗ, ಬಳ್ಳಾರಿ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಕೊಡಗು, ಮೈಸೂರು, ಹಾಸನ, ತುಮಕೂರು ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್‌‘ ಮುನ್ನೆಚ್ಚರಿಕೆ ಕೊಡಲಾಗಿದೆ.

ADVERTISEMENT

ಹಾಸನ, ಕೊಡಗು, ಮೈಸೂರು ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಶನಿವಾರ ‘ಯೆಲ್ಲೊ ಅಲರ್ಟ್‌’ ನೀಡಲಾಗಿದೆ.

ಬೆಂಗಳೂರಿನಲ್ಲಿ ಎರಡು ದಿನವೂ ಹಗಲು ವೇಳೆ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ಅಥವಾ ರಾತ್ರಿ ವೇಳೆ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.