ADVERTISEMENT

ಧಾರಾಕಾರ ಮಳೆಯಾಗುವ ಮುನ್ಸೂಚನೆ: ರಾಜ್ಯದ 9 ಜಿಲ್ಲೆಗಳಲ್ಲಿ ‘ಯೆಲ್ಲೊ ಅಲರ್ಟ್‌’

​ಪ್ರಜಾವಾಣಿ ವಾರ್ತೆ
Published 7 ಅಕ್ಟೋಬರ್ 2021, 17:34 IST
Last Updated 7 ಅಕ್ಟೋಬರ್ 2021, 17:34 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ    

ಬೆಂಗಳೂರು: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಅ.8ರಿಂದ 12ರವರೆಗೆ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಇದೇ 8 ರಂದು ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ‘ಯೆಲ್ಲೊ ಅಲರ್ಟ್‌’ ಮುಂದುವರಿಸಲಾಗಿದೆ.

ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮಳೆ ದಿಢೀರ್‌ ತಗ್ಗಿದ್ದು, ಕೆಲವೆಡೆ ಸಾಧಾರಣ ಮಳೆ ಸಾಧ್ಯತೆ ಇದೆ. ಕರಾವಳಿಯಲ್ಲಿ ಗಂಟೆಗೆ ಗರಿಷ್ಠ 50 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ.

ADVERTISEMENT

ಮಳೆ ಎಲ್ಲಿ, ಎಷ್ಟು?:ಚಿತ್ರದುರ್ಗದಲ್ಲಿ ಗುರುವಾರಗರಿಷ್ಠ 13 ಸೆಂ.ಮೀ ಮಳೆಯಾಗಿದೆ. ಕಾರವಾರ, ಪಾವಗಡ 7, ಹಿರಿಯೂರು, ಗೌರಿ ಬಿದನೂರು 6, ದಾವಣಗೆರೆ 5, ಕಂಪ್ಲಿ, ಶಿವಮೊಗ್ಗ 4, ಹಾವೇರಿ, ಕುಮಟಾ, ಬೆಳವಾಗಿ, ಮಧುಗಿರಿ, ಶಿಡ್ಲಘಟ್ಟ, ಹಾಸನ, ಶ್ರೀರಂಗಪಟ್ಟಣ 3, ತಿಪಟೂರು 2, ನಿಪ್ಪಾಣಿ, ಚಿಕ್ಕೋಡಿ, ಹೊಸಕೋಟೆ, ಮಂಡ್ಯದಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.