ADVERTISEMENT

ಕೊಡಗು - ಕೇರಳ ಅಂತರ ರಾಜ್ಯ ಹೆದ್ದಾರಿ ಬಂದ್ 

ಕೊಡಗಿನಲ್ಲಿ ಮಳೆ ಅಬ್ಬರ

​ಪ್ರಜಾವಾಣಿ ವಾರ್ತೆ
Published 5 ಆಗಸ್ಟ್ 2019, 9:17 IST
Last Updated 5 ಆಗಸ್ಟ್ 2019, 9:17 IST
ಕೊಡಗಿನಿಂದ ಕೇರಳಕ್ಕೆ ಸಂಪರ್ಕ ಕಲ್ಪಿಸುವ ಅಂತರ‌ ರಾಜ್ಯ‌ ಹೆದ್ದಾರಿಯಲ್ಲಿ ಮಳೆಯಿಂದಾಗಿ ರಸ್ತೆ ಕುಸಿದಿದೆ.
ಕೊಡಗಿನಿಂದ ಕೇರಳಕ್ಕೆ ಸಂಪರ್ಕ ಕಲ್ಪಿಸುವ ಅಂತರ‌ ರಾಜ್ಯ‌ ಹೆದ್ದಾರಿಯಲ್ಲಿ ಮಳೆಯಿಂದಾಗಿ ರಸ್ತೆ ಕುಸಿದಿದೆ.    

ಮಡಿಕೇರಿ: ಕೊಡಗು‌ ಜಿಲ್ಲೆಯಾದ್ಯಂತ ಮಳೆ ಆರ್ಭಟಿಸುತ್ತಿದೆ. ಭಾಗಮಂಡಲ ಜಲಾವೃತವಾಗಿದ್ದು, ಭಾಗಮಂಡಲ- ನಾಪೋಕ್ಲು‌ ರಸ್ತೆಯ ಮೇಲೆ ನೀರು ಹರಿಯುತ್ತಿದೆ. ವಾಹನ ಸಂಚಾರ ಸ್ಥಗಿತವಾಗಿದೆ.

ಕೊಡಗಿನಿಂದ ಕೇರಳಕ್ಕೆ ಸಂಪರ್ಕ ಕಲ್ಪಿಸುವ ಅಂತರ ರಾಜ್ಯ ಹೆದ್ದಾರಿಯ ವಾಟೆಕೊಲ್ಲಿ (ಪೆರುಂಬಾಡಿ - ಮಾಕುಟ್ಟ) ಎಂಬಲ್ಲಿ ರಸ್ತೆ ಕುಸಿತವಾಗಿದ್ದು ವಾಹನ ಸಂಚಾರ ಬಂದ್ ಆಗಿದೆ. ಕಳೆದ ವರ್ಷವೂ ಈ ಮಾರ್ಗದಲ್ಲಿ ಭೂಕುಸಿತ ಸಂಭವಿಸಿ, ಮೂರು ತಿಂಗಳು‌ ವಾಹನ ಸಂಚಾರ ಬಂದ್ ಆಗಿತ್ತು.

ಕೇರಳಕ್ಕೆ ತೆರಳುವ ವಾಹನಗಳು ಗೋಣಿಕೊಪ್ಪಲು, ಪೊನ್ನಂಪೇಟೆ, ಕುಟ್ಟ ಮಾರ್ಗವಾಗಿ ಕೇರಳಕ್ಕೆ ತೆರಳುತ್ತಿವೆ.
ಮಡಿಕೇರಿ, ಜೋಡುಪಾಲ, ಕಾಟಕೇರಿ, ಅಪ್ಪಂಗಳ, ವಿರಾಜಪೇಟೆ, ಪೊನ್ನಂಪೇಟೆ, ಶ್ರೀಮಂಗಲ ವ್ಯಾಪ್ತಿಯಲ್ಲಿ ರಾತ್ರಿಯಿಡೀ ಭಾರಿ ಮಳೆ ಸುರಿದಿದೆ. ಕಾವೇರಿ ಹಾಗೂ ಲಕ್ಷ್ಮಣತೀರ್ಥದಲ್ಲಿ ಅಪಾರ‌ ಪ್ರಮಾಣದ ನೀರು ಹರಿಯುತ್ತಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.