ADVERTISEMENT

ರಾಜ್ಯದಲ್ಲಿ ಎರಡು ದಿನ ಭಾರಿ ಮಳೆ ಸಾಧ್ಯತೆ; ಹಲವೆಡೆ ಯಲ್ಲೊ ಅಲರ್ಟ್‌ ಘೋಷಣೆ

ಪಿಟಿಐ
Published 7 ಜನವರಿ 2021, 14:56 IST
Last Updated 7 ಜನವರಿ 2021, 14:56 IST
ಚಿತ್ರದುರ್ಗ ಜಿಲ್ಲೆಯಲ್ಲಿ ಸುರಿದ ಅಕಾಲಿಕ ಮಳೆಯಿಂದಾಗಿ ಮಲ್ಲಾಪುರ ಕೆರೆ ಕೋಡಿ ಬಿದ್ದು, ನೀರು ಹೊರಗೆ ಹರಿಯುತ್ತಿರುವುದು.
ಚಿತ್ರದುರ್ಗ ಜಿಲ್ಲೆಯಲ್ಲಿ ಸುರಿದ ಅಕಾಲಿಕ ಮಳೆಯಿಂದಾಗಿ ಮಲ್ಲಾಪುರ ಕೆರೆ ಕೋಡಿ ಬಿದ್ದು, ನೀರು ಹೊರಗೆ ಹರಿಯುತ್ತಿರುವುದು.   

ಬೆಂಗಳೂರು: ರಾಜ್ಯದ ಕರಾವಳಿ ಮತ್ತು ಮಲೆನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಯಲ್ಲೊ ಅಲರ್ಟ್‌ ಘೋಷಿಸಲಾಗಿದೆ.

ಬುಧವಾರ ಮತ್ತು ಗುರುವಾರ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿದೆ. ಜತೆಗೆ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಮಳೆ ಮುಂದುವರಿಯಲಿದೆ ಎಂದು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಎಚ್ಚರಿಕೆ ನೀಡಿದೆ.

ಸದ್ಯ ಮಳೆಯಿಂದಾಗಿ ಯಾವುದೇ ಪ್ರಾಣ ಹಾನಿ, ಆಸ್ತಿ ಹಾನಿ ಸಂಭವಿಸಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ.

ADVERTISEMENT

ಅಕಾಲಿಕ ಮಳೆಯಿಂದಾಗಿ ರೈತರು ಸಾಕಷ್ಟು ಸಂಕಷ್ಟಕ್ಕೆ ಒಳಗಾಗುತ್ತಿದ್ದಾರೆ. ಕೊಯ್ಲು ಹಾಗೂ ಬೆಳೆಗೆ ಈ ಅಕಾಲಿಕ ಮಳೆ ಹಾನಿಯುಂಟು ಮಾಡಲಿದೆ ಎಂದು ರೈತರು ಆತಂಕ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.