ADVERTISEMENT

ಮಡಿಕೇರಿಯಲ್ಲಿ ಧಾರಾಕಾರ ಮಳೆ

​ಪ್ರಜಾವಾಣಿ ವಾರ್ತೆ
Published 11 ಮಾರ್ಚ್ 2019, 19:42 IST
Last Updated 11 ಮಾರ್ಚ್ 2019, 19:42 IST

ಮಡಿಕೇರಿ: ಕೊಡಗು ಜಿಲ್ಲೆಯ ವಿವಿಧೆಡೆ ಸೋಮವಾರ ಸಂಜೆ ಗುಡುಗು ಸಹಿತ ಧಾರಾಕಾರ ಮಳೆ ಸುರಿಯಿತು. ಕಾಫಿ ಬೆಳೆಗೆ ಅಗತ್ಯವಿದ್ದ ಹೂಮಳೆ ಇಲ್ಲದೇ ಬೆಳೆಗಾರರು ಇಷ್ಟು ದಿವಸ ಕಂಗಾಲಾಗಿದ್ದರು. ಎರಡು ದಿನಗಳಿಂದ ಜಿಲ್ಲೆಯ ವಿವಿಧೆಡೆ ಮಳೆ ಸುರಿಯುತ್ತಿದ್ದು ಬೆಳೆಗಾರರು ಸಂತಸಗೊಂಡಿದ್ದಾರೆ.

ಭಾನುವಾರ ರಾತ್ರಿಯೂ ಮಡಿಕೇರಿ, ಅಪ್ಪಂಗಳ, ಕಾಟಕೇರಿ, ನಾಪೋಕ್ಲು, ಭಾಗಮಂಡಲ ಹಾಗೂ ಸೋಮವಾರಪೇಟೆ ಸುತ್ತಮುತ್ತ ಆಲಿಕಲ್ಲು ಸಹಿತ ಭಾರೀ ಮಳೆಯಾಗಿತ್ತು. ಆದರೆ, ಫೆಬ್ರುವರಿ ಮೊದಲ ವಾರದಲ್ಲಿ ಮಳೆ ಸುರಿದಿದ್ದು, ಬಳಿಕ ಕೈಕೊಟ್ಟಿತ್ತು. ಇದರಿಂದ ಬೆಳೆಗಾರರು ಆತಂಕಗೊಂಡಿದ್ದರು.

ಅರಕಲಗೂಡು ವರದಿ:ಪಟ್ಟಣ ಹಾಗೂ ಮಲ್ಲಿಪಟ್ಟಣ ಹೋಬಳಿಯ ಕೆಲವೆಡೆ ಭಾನುವಾರ ರಾತ್ರಿ ಮಳೆಯಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.