ADVERTISEMENT

ತಾಪಮಾನ ಹೆಚ್ಚಳ: 7ರಿಂದ ಭಾರಿ ಮಳೆ ಸಾಧ್ಯತೆ

​ಪ್ರಜಾವಾಣಿ ವಾರ್ತೆ
Published 5 ಏಪ್ರಿಲ್ 2020, 2:53 IST
Last Updated 5 ಏಪ್ರಿಲ್ 2020, 2:53 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ತಾಪಮಾನ ದಿನ ದಿಂದ ದಿನಕ್ಕೆ ಏರುತ್ತಿದ್ದು, ಇದೇ 7 ಮತ್ತು 8ರಂದು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಸಹಿತ ಭಾರಿ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಹದಿನೈದು ದಿನಗಳಿಂದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕನಿಷ್ಠ 35 ಡಿಗ್ರಿ ಸೆಲ್ಸಿಯಸ್‍ನಿಂದ ಗರಿಷ್ಠ 40 ಡಿಗ್ರಿ ಸೆಲ್ಸಿಯಸ್‍ಗಳವರೆಗೆ ತಾಪಮಾನ ದಾಖಲಾಗಿದೆ. ಮುಂದಿನ ವಾರದಲ್ಲಿ ಇದರ ಪ್ರಮಾಣ ಮತ್ತಷ್ಟು ಏರಲಿದ್ದು, ಈ ವೇಳೆ ಮಳೆಯಾಗುವ ಸಾಧ್ಯತೆ ಇದೆ ಎಂದಿದೆ.

ಏ.7ರಂದು ಕರಾವಳಿ ಭಾಗದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಒಳನಾಡಿನ ಕೊಪ್ಪಳ, ರಾಯಚೂರು, ಯಾದಗಿರಿ ಹಾಗೂ ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗಲಿದ್ದು, ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ. 8ರಂದು ದಕ್ಷಿಣ ಒಳನಾಡಿನ ಹಲವೆಡೆ ಮಳೆ ಸುರಿಯಲಿದೆ.

ADVERTISEMENT

‘ಆರ್ದ್ರತೆಯಲ್ಲಿ ಏರುಪೇರು ಹಾಗೂ ತಾಪಮಾನದಲ್ಲಿ ನಿರಂತರ ಏರಿಕೆ ಕಾಣುತ್ತಿರುವುದರಿಂದ ಮಳೆಯಾಗಲಿದೆ. ಸದ್ಯದ ಮಾಹಿತಿ ಪ್ರಕಾರ ಎರಡು ದಿನಗಳು ಮಳೆಯಾಗುವ ಸೂಚನೆ ಇದೆ’ ಎಂದು ಇಲಾಖೆ ನಿರ್ದೇಶಕ ಸಿ.ಎಸ್.ಪಾಟೀಲ 'ಪ್ರಜಾವಾಣಿ'ಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.