ADVERTISEMENT

ಇಂದು, ನಾಳೆ ಭಾರಿ ಮಳೆ ಸಾಧ್ಯತೆ: ರಾಜ್ಯದಾದ್ಯಂತ ‘ಯೆಲ್ಲೊ ಅಲರ್ಟ್‌’

​ಪ್ರಜಾವಾಣಿ ವಾರ್ತೆ
Published 21 ಅಕ್ಟೋಬರ್ 2019, 2:02 IST
Last Updated 21 ಅಕ್ಟೋಬರ್ 2019, 2:02 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ಅಕ್ಟೋಬರ್21 ಹಾಗೂ 22ರಂದು ರಾಜ್ಯದಾದ್ಯಂತ ಗುಡುಗು ಸಿಡಿಲು ಸಹಿತ ಭಾರಿ ಮಳೆ ಸುರಿಯುವ ಸಾಧ್ಯತೆಯಿದೆ. ಹೀಗಾಗಿ ಮುಂದಿನ 48 ಗಂಟೆಗಳವರೆಗೆರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ‘ಯೆಲ್ಲೊ ಅಲರ್ಟ್‌’ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರಾವಳಿ ಭಾಗದಲ್ಲಿ ಗಂಟೆಗೆ 45 ರಿಂದ 55 ಕಿ.ಮೀ. ವೇಗದಲ್ಲಿ ಗಾಳಿ ಬೀಸುತ್ತಿದ್ದು, ಮೀನುಗಾರರಿಗೆಸೋಮವಾರ ಕಡಲಿಗೆ ಇಳಿಯದಂತೆ ಇಲಾಖೆ ಮುನ್ಸೂಚನೆ ನೀಡಿದೆ.

ಅ.21ರಂದು ಕರ್ನಾಟಕದ ಉತ್ತರ ಒಳನಾಡಿನ ಪ್ರದೇಶಗಳಾದಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ವಿಜಯಪುರ 65 ಮಿ.ಮೀಕ್ಕೂ ಅಧಿಕಮಳೆಯಾಗುವ ಸಾಧ್ಯತೆ ಇದೆ.

ADVERTISEMENT

ಅ.22ರಂದುಬಾಗಲಕೋಟೆ, ಬೆಳಗಾಂ, ಬೀದರ್,ಧಾರವಾಡ, ಗದಗ, ಹಾವೇರಿ, ಕಲ್ಬುರ್ಗಿ, ಕೊಪ್ಪಳ, ವಿಜಯಪುರದಲ್ಲೂ65 ಮಿ.ಮೀಕ್ಕೂ ಹೆಚ್ಚು ಮಳೆಯಾಗುವ ಸಂಭವವಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.