ADVERTISEMENT

ಕರಾವಳಿ: ಭಾರಿ ಮಳೆ ಸಾಧ್ಯತೆ

​ಪ್ರಜಾವಾಣಿ ವಾರ್ತೆ
Published 14 ಮೇ 2020, 20:00 IST
Last Updated 14 ಮೇ 2020, 20:00 IST
ಕಾರವಾರದ ಕಡಲತೀರದ ದೃಶ್ಯ
ಕಾರವಾರದ ಕಡಲತೀರದ ದೃಶ್ಯ    

ಬೆಂಗಳೂರು: ರಾಜ್ಯದ ಕರಾವಳಿ ಭಾಗದಲ್ಲಿ ಇದೇ 15ರಿಂದ 17ರವರೆಗೆ ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರಾವಳಿಯಲ್ಲಿ ಗಂಟೆಗೆ 30ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದೆ. ಈ ಭಾಗದ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾನುವಾರದವರೆಗೆ 'ಯೆಲ್ಲೊ ಅಲರ್ಟ್' ಘೋಷಿಸಲಾಗಿದೆ.

ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಶುಕ್ರವಾರ ಭಾರಿ ಮಳೆಯಾಗಲಿರುವ ಹಿನ್ನೆಲೆಯಲ್ಲಿ ಈ ಭಾಗದಲ್ಲೂ 'ಯೆಲ್ಲೊ ಅಲರ್ಟ್' ಘೋಷಿಸಿದೆ. ಮೈಸೂರು ಸೇರಿ ವಿವಿಧ ಜಿಲ್ಲೆಗಳಲ್ಲಿ ಭಾನುವಾರ ಹೆಚ್ಚು ಮಳೆಯಾಗಲಿದೆ. ಉತ್ತರ ಒಳನಾಡಿನಲ್ಲಿ ಗುಡುಗು ಸಿಡಿಲು ಹೆಚ್ಚಾಗಿರಲಿದ್ದು, ಕೆಲವೆಡೆ ಚದುರಿದಂತೆ ಮಳೆಯಾಗಲಿದೆ.

ADVERTISEMENT

ರಾಯಚೂರಿನಲ್ಲಿ 40 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ಹಾಗೂ ಚಿಕ್ಕಮಗಳೂರಿನಲ್ಲಿ 28 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.