ADVERTISEMENT

ಭಾರಿ ಮಳೆ ಸಾಧ್ಯತೆ: 4 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್

​ಪ್ರಜಾವಾಣಿ ವಾರ್ತೆ
Published 24 ಜೂನ್ 2020, 19:43 IST
Last Updated 24 ಜೂನ್ 2020, 19:43 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ಬೆಂಗಳೂರು: ರಾಜ್ಯದ ದಕ್ಷಿಣ ಒಳನಾಡು ಹಾಗೂ ಕರಾವಳಿಯಲ್ಲಿ ಇದೇ 25ರಿಂದ 28ರವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗುವ ನಿರೀಕ್ಷೆಯಿದ್ದು, ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ.

ಉತ್ತರಕನ್ನಡ, ದಕ್ಷಿಣಕನ್ನಡ, ಉಡುಪಿ, ಬಳ್ಳಾರಿ, ಬೆಂಗಳೂರು, ಬೆಂಗಳೂರು(ಗ್ರಾ), ಚಿಕ್ಕಬಳ್ಳಾಪುರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಹಾಗೂ ತುಮಕೂರು ಜಿಲ್ಲೆಗಳಲ್ಲಿ 3 ದಿನ ಭಾರಿ ಮಳೆ ಸುರಿವ ಸಾಧ್ಯತೆ ಇದೆ.

ADVERTISEMENT

ಉತ್ತಮ ಮಳೆ

ವಿಜಯಪುರ ಜಿಲ್ಲೆಯ ಆಲಮೇಲದಲ್ಲಿ ಉತ್ತಮ ಮಳೆಯಾಗಿದೆ. ಭೀಮಾ ತೀರದಲ್ಲಿ ಸಾಕಷ್ಟು ಮಳೆಯಾಗುತ್ತಿರುವುದರಿಂದ ನದಿಗೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.