ADVERTISEMENT

ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಭಾರಿ ಮಳೆ: ಹವಾಮಾನ ಇಲಾಖೆ

​ಪ್ರಜಾವಾಣಿ ವಾರ್ತೆ
Published 2 ಆಗಸ್ಟ್ 2022, 21:00 IST
Last Updated 2 ಆಗಸ್ಟ್ 2022, 21:00 IST
ನೆರೆಯಿಂದಾಗಿ ಸಂಪಾಜೆಯಲ್ಲಿ ಮನೆಯೊಂದು ಜಲಾವೃತವಾಗಿರುವುದು
ನೆರೆಯಿಂದಾಗಿ ಸಂಪಾಜೆಯಲ್ಲಿ ಮನೆಯೊಂದು ಜಲಾವೃತವಾಗಿರುವುದು   

ಬೆಂಗಳೂರು: ರಾಜ್ಯದ ವಿವಿಧೆಡೆ ಮುಂದಿನ ನಾಲ್ಕು ದಿನಗಳು ಗುಡುಗು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ನೈರುತ್ಯ ಮುಂಗಾರು ದಕ್ಷಿಣ ಒಳನಾಡಿನಲ್ಲಿ ತೀವ್ರವಾಗಿದ್ದು, ಉತ್ತರ ಒಳನಾಡಿನಲ್ಲಿ ಚುರುಕುಗೊಂಡಿದೆ. ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ ಹಾಗೂ ಕೊಡಗು ಜಿಲ್ಲೆಗೆ ಬುಧವಾರ ‘ರೆಡ್ ಅಲರ್ಟ್’ ಘೋಷಿಸಲಾಗಿದೆ. ಶಿವಮೊಗ್ಗ ಜಿಲ್ಲೆಗೆ ‘ಆರೆಂಜ್ ಅಲರ್ಟ್’, ಬೀದರ್, ಕಲಬುರ್ಗಿ, ವಿಜಯಪುರ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ತುಮಕೂರು, ಹಾಸನ ಹಾಗೂ ಮೈಸೂರು ಜಿಲ್ಲೆಗೆ ‘ಯೆಲ್ಲೊ ಅಲರ್ಟ್’ ನೀಡಲಾಗಿದೆ.24 ಗಂಟೆಗಳ ಅವಧಿಯಲ್ಲಿ ಕರಾವಳಿಯ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT