ADVERTISEMENT

ಭಾರಿ ಮಳೆ: ಏಳು ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’

​ಪ್ರಜಾವಾಣಿ ವಾರ್ತೆ
Published 1 ಸೆಪ್ಟೆಂಬರ್ 2024, 15:58 IST
Last Updated 1 ಸೆಪ್ಟೆಂಬರ್ 2024, 15:58 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ರಾಜ್ಯದ ಕರಾವಳಿ ಹಾಗೂ ಉತ್ತರ ಒಳನಾಡಿನ ಕೆಲವೆಡೆ ಸೋಮವಾರ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು ಏಳು ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ ಘೋಷಿಸಿದೆ. 

ಉತ್ತರ ಕನ್ನಡ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಯಾದಗಿರಿ, ಕಲಬುರಗಿ ಹಾಗೂ ಬೀದರ್ ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ ನೀಡಲಾಗಿದೆ. ಈ ಜಿಲ್ಲೆಗಳಲ್ಲದೆ ಉತ್ತರ ಕನ್ನಡದ ಕೆಲವೆಡೆ ನಿರಂತರ ಗಾಳಿಯೊಂದಿಗೆ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಜಿಲ್ಲೆಗಳ ಒಂದೆರಡು ಕಡೆ ಪ್ರತಿ ಗಂಟಗೆ 30 ರಿಂದ 40 ಕಿ.ಮೀ ಗಾಳಿಯೊಂದಿಗೆ ಭಾರಿ ಮಳೆಯಾಗುವ ಸಂಭವವಿದೆ ಎಂದು ಇಲಾಖೆ ತಿಳಿಸಿದೆ. 

ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಒಳನಾಡಿನ ಉಳಿದ ಜಿಲ್ಲೆಗಳ ಹಲವು ಸ್ಥಳಗಳಲ್ಲಿ ನಿರಂತರ ಗಾಳಿಯೊಂದಿಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳ ಕೆಲವೆಡೆ ಸಾಧಾರಣ ಮಳೆಯಾಗುವ ಸಂಭವವಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

ADVERTISEMENT

ಕರಾವಳಿ ಉದ್ದಕ್ಕೂ ಪ್ರತಿ ಗಂಟಗೆ 35 ರಿಂದ 55 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಆದ್ದರಿಂದ ಮೀನುಗಾರರು ಎಚ್ಚರ ವಹಿಸಬೇಕು. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ತುಂತುರು ಮಳೆಯಾಗುವ ಸಂಭವವಿದೆ ಎಂದು ಇಲಾಖೆ ತಿಳಿಸಿದೆ. 

ಇದೇ 5ರವರೆಗೆ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಒಂದೆರಡು ಕಡೆ ಭಾರಿ ಮಳೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಇಲಾಖೆ ಹೇಳಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.