ADVERTISEMENT

ರಾಜ್ಯದಲ್ಲಿ ಭಾರಿ ಮಳೆ ಸಾಧ್ಯತೆ: ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಸೂಚನೆ

​ಪ್ರಜಾವಾಣಿ ವಾರ್ತೆ
Published 21 ಜೂನ್ 2022, 13:35 IST
Last Updated 21 ಜೂನ್ 2022, 13:35 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ ಹಾಗೂ ಕೋಲಾರ ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಯಲ್ಲಿ ಭಾರಿ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು ಸುತ್ತಮತ್ತಲೂ ಮೋಡ ಕವಿದ ವಾತಾವರಣ ಇರಲಿದ್ದು, ಗುಡುಗು ಸಹಿತ ಮಳೆ ಬೀಳುವ ಸಾಧ್ಯತೆಯಿದೆ ಎಂದು ಮುನ್ನೆಚ್ಚರಿಕೆ ನೀಡಿದೆ.

ಕರಾವಳಿ ಭಾಗದಲ್ಲಿ ಪ್ರತಿ ಗಂಟೆಗೆ 40–50 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದ್ದು ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

ADVERTISEMENT

ಮಂಗಳವಾರ ಬೆಳಿಗ್ಗೆ 8.30ಕ್ಕೆ ಕೊನೆಯಾದಂತೆ ಕಳೆದ 24 ಗಂಟೆಯ ಅವಧಿಯಲ್ಲಿ ಬೀದರ್‌ ಜಿಲ್ಲೆಯ ಜನವಾಡದಲ್ಲಿ 11 ಸೆಂ.ಮೀ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಯ ಮಂಕಿಯಲ್ಲಿ 10 ಸೆಂ.ಮೀ, ಉತ್ತರ ಕನ್ನಡದ ಹೊನ್ನಾವರ ಹಾಗೂ ಉಡುಪಿಯ ಕೋಟಾದಲ್ಲಿ ತಲಾ 8 ಸೆಂ.ಮೀ, ಕಾರವಾರ, ಹೊನ್ನಾವರದಲ್ಲಿ ತಲಾ 7 ಸೆಂ.ಮೀ ಮಳೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.