ADVERTISEMENT

7 ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಸಾಧ್ಯತೆ

ಇಂದು ‘ರೆಡ್‌ ಅಲರ್ಟ್’ ಘೋಷಣೆ

​ಪ್ರಜಾವಾಣಿ ವಾರ್ತೆ
Published 23 ಜುಲೈ 2021, 18:23 IST
Last Updated 23 ಜುಲೈ 2021, 18:23 IST
   

ಬೆಂಗಳೂರು: ಮುಂಗಾರು ತೀವ್ರಗೊಂಡಿರುವುದರಿಂದ ರಾಜ್ಯದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಜುಲೈ 24ರಂದು ಧಾರಾಕಾರ ಮಳೆಯಾಗುವ ಮುನ್ಸೂಚನೆ ಇದೆ. ಈ ಜಿಲ್ಲೆಗಳಲ್ಲಿ ‘ರೆಡ್‌ ಅಲರ್ಟ್‌’ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

‘ಕರಾವಳಿ ಜಿಲ್ಲೆಗಳಲ್ಲಿ ಜು.27 ರವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯಲ್ಲಿ ಗಂಟೆಗೆ ಗರಿಷ್ಠ 60 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದ್ದು, 4.3 ಮೀಟರ್‌ಗಳಷ್ಟು ಎತ್ತರದ ಅಲೆಗಳು ಏಳುವ ಸೂಚನೆ ಇದ್ದು, ಮೀನುಗಾರರು ಇದೇ 27ರವರೆಗೆ ಸಮುದ್ರಕ್ಕೆ ಇಳಿಯಬಾರದು’ ಎಂದೂ ಇಲಾಖೆ ಎಚ್ಚರಿಸಿದೆ.

ಬೆಳಗಾವಿ, ಧಾರವಾಡ ಜಿಲ್ಲೆಗಳಲ್ಲೂ ಗಡುಗು ಸಹಿತ ಹೆಚ್ಚು ಮಳೆಯಾಗುವ ಸಾಧ್ಯತೆ ಇರುವುದರಿಂದ ‘ಆರೆಂಜ್ ಅಲರ್ಟ್‌’ ಘೋಷಿಸಲಾಗಿದೆ. ಗದಗ, ಹಾವೇರಿ, ಕಲಬುರ್ಗಿ, ಯಾದಗಿರಿ ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್‌’ ನೀಡಲಾಗಿದೆ ಎಂದೂ ತಿಳಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.