ADVERTISEMENT

10 ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ: ‘ಯೆಲ್ಲೊ ಅಲರ್ಟ್’ ಘೋಷಣೆ

​ಪ್ರಜಾವಾಣಿ ವಾರ್ತೆ
Published 25 ಸೆಪ್ಟೆಂಬರ್ 2020, 20:51 IST
Last Updated 25 ಸೆಪ್ಟೆಂಬರ್ 2020, 20:51 IST
ಉಡುಪಿಯಲ್ಲಿ ಮಳೆ
ಉಡುಪಿಯಲ್ಲಿ ಮಳೆ   

ಬೆಂಗಳೂರು: ರಾಜ್ಯದ ಕರಾವಳಿ ಜಿಲ್ಲೆಗಳು ಹಾಗೂ ಉತ್ತರ ಒಳನಾಡಿನಲ್ಲಿ ಸೆ.26 ಮತ್ತು 27ರಂದು ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಯಾದಗಿರಿ, ವಿಜಯಪುರ, ರಾಯಚೂರು, ಕಲಬುರ್ಗಿ, ಗದಗ, ಧಾರವಾಡ, ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಶನಿವಾರ ವ್ಯಾಪಕ ಮಳೆಯಾಗುವ ಸಾಧ್ಯತೆ ಇರುವುದರಿಂದ ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ.

ನೈರುತ್ಯ ಮುಂಗಾರು ಚುರುಕಾಗಿರುವುದರಿಂದ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಹೆಚ್ಚು ಮಳೆಯಾಗುವ ನಿರೀಕ್ಷೆ ಇದೆ. ದಕ್ಷಿಣ ಒಳನಾಡಿನಲ್ಲಿ ಮಳೆ ತಗ್ಗಿದ್ದು, ಶಿವಮೊಗ್ಗ, ಮೈಸೂರು, ಮಂಡ್ಯ, ಚಿತ್ರದುರ್ಗ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಸಹಿತ ಕೆಲವೆಡೆ ಸಾಧಾರಣ ಮಳೆಯಾಗಬಹುದು.

ADVERTISEMENT

ಮಳೆ-ಎಲ್ಲಿ,ಎಷ್ಟು?: ಕಾರವಾರದಲ್ಲಿ ಗರಿಷ್ಠ 11 ಸೆಂ.ಮೀ ಮಳೆಯಾಗಿದೆ. ಭಟ್ಕಳ 4, ಕೊಲ್ಲೂರು 3, ಅಂಕೋಲಾ, ಬೀದರ್, ಆಗುಂಬೆ 2, ಧರ್ಮಸ್ಥಳ, ಪುತ್ತೂರು, ಕಾರ್ಕಳ, ಉಡುಪಿಯಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.