ADVERTISEMENT

ಮೈಸೂರು ಅರಮನೆ ಬಳಿ ಹೀಲಿಯಂ ಸಿಲಿಂಡರ್‌ ಸ್ಫೋಟ: ವರದಿಗೆ ಸೂಚನೆ

​ಪ್ರಜಾವಾಣಿ ವಾರ್ತೆ
Published 26 ಡಿಸೆಂಬರ್ 2025, 14:40 IST
Last Updated 26 ಡಿಸೆಂಬರ್ 2025, 14:40 IST
ಜಿ.ಪರಮೇಶ್ವರ
ಜಿ.ಪರಮೇಶ್ವರ   

ಬೆಂಗಳೂರು: ಮೈಸೂರು ಅರಮನೆ ದ್ವಾರದ ಮುಂಭಾಗದಲ್ಲಿ ಗುರುವಾರ ಹೀಲಿಯಂ ಸಿಲಿಂಡರ್‌ ಸ್ಫೋಟ ಸಂಭವಿಸಿರುವ ಪ್ರಕರಣದ ವಿಸ್ತೃತ ತನಿಖೆ ನಡೆಸಿ, ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಗೃಹ ಸಚಿವ ಜಿ.ಪರಮೇಶ್ವರ ಅವರು ಹೇಳಿದರು.

ಶುಕ್ರವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಹೀಲಿಯಂ ಬಲೂನು ಮಾರುತ್ತಿದ್ದದ್ದು ಲಖನೌನ ವ್ಯಕ್ತಿ. ಕೆಲವೇ ದಿನಗಳ ಹಿಂದೆ ಆತ ಇಲ್ಲಿಗೆ ಬಂದು ಬಲೂನು ವ್ಯಾಪಾರ ಮಾಡುತ್ತಿದ್ದ. ಆತನಿಗೆ ಹೀಲಿಯಂ ಸಿಲಿಂಡರ್‌ ಹೇಗೆ ಲಭಿಸಿತು ಎಂಬುದರ ಬಗ್ಗೆ ಪರಿಶೀಲನೆ ನಡೆಸುವಂತೆ ಸೂಚಿಸಿದ್ದೇನೆ’ ಎಂದರು.

‘ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಬರುವ ಸ್ಥಳಗಳಲ್ಲಿ ಸಣ್ಣ–ಪುಟ್ಟ ವ್ಯಾಪಾರ ನಡೆಸುವವರ ಮೇಲೆ ನಿಯಂತ್ರಣ ಇದ್ದಂತಿಲ್ಲ. ಈ ಅವಘಡವನ್ನು ಸೂಕ್ಷ್ಮವಾಗಿ ನೋಡಬೇಕಿದೆ. ಪ್ರವಾಸೋದ್ಯಮ ಇಲಾಖೆಯ ಅಧಿಕಾರಿಗಳ ಜತೆಗೂ ಚರ್ಚಿಸುವಂತೆ ಸೂಚಿಸಿದ್ದೇನೆ. ಹೊಸ ವರ್ಷಾಚರಣೆ ಸಂದರ್ಭದಲ್ಲಿ ಭದ್ರತಾ ವ್ಯವಸ್ಥೆ ಕೈಗೊಳ್ಳುವ ಸಂಬಂಧ ಭಾನುವಾರ ಹಿರಿಯ ಪೊಲೀಸ್‌ ಅಧಿಕಾರಿಗಳ ಸಭೆ ಕರೆದಿದ್ದೇನೆ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.