ADVERTISEMENT

ಮರಾಠಿ ಭಾಷೆ ಉಳಿಸಲು ನೆರವು: ಎಂಇಎಸ್‌ ಜತೆ ಮಹಾರಾಷ್ಟ್ರ ಶಿಕ್ಷಣ ಸಚಿವರ ಸಭೆ

​ಪ್ರಜಾವಾಣಿ ವಾರ್ತೆ
Published 9 ಜನವರಿ 2023, 19:46 IST
Last Updated 9 ಜನವರಿ 2023, 19:46 IST

ಬೆಳಗಾವಿ: ಮಹಾರಾಷ್ಟ್ರದ ಶಿಕ್ಷಣ ಸಚಿವ ದೀಪಕ್‌ ಕೇಸರಕರ್‌ ಮಹಾರಾಷ್ಟ್ರ ಏಕೀಕರಣ ಸಮಿತಿ(ಎಂಇಎಸ್) ಮುಖಂಡರೊಂದಿಗೆ ಸೋಮವಾರ ಸಭೆ ನಡೆಸಿ, ‘ಗಡಿಭಾಗದಲ್ಲಿ ಮರಾಠಿ ಭಾಷೆ, ಸಂಸ್ಕೃತಿ ಉಳಿಸಲು ಮಹಾರಾಷ್ಟ್ರ ಸರ್ಕಾರದಿಂದ ಅಗತ್ಯ ನೆರವು ಕೊಡುತ್ತೇವೆ’ ಎಂದು ಭರವಸೆ ನೀಡಿದ್ದಾರೆ.

ನಗರದಲ್ಲಿ ನಡೆದ ಖಾಸಗಿ ಕಾರ್ಯಕ್ರಮವೊಂದರಲ್ಲಿ ಅವರು ಭಾಗಿಯಾಗಿದ್ದರು. ಈ ಸಂದರ್ಭದಲ್ಲಿ ತಮ್ಮನ್ನು ಭೇಟಿಯಾದ ಎಂಇಎಸ್‌ ನಾಯಕರೊಂದಿಗೆ ಚರ್ಚಿಸಿದರು.

‘ಮರಾಠಿ ಭಾಷೆ, ಸಂಸ್ಕೃತಿ ಉಳಿಸಲು ಇಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮರಾಠಿ ನಾಟಕಗಳನ್ನು ಪ್ರದರ್ಶಿಸಲಾಗುವುದು. ಕರ್ನಾಟಕದಲ್ಲಿರುವ ಮರಾಠಿ ಶಿಕ್ಷಣ ಸಂಸ್ಥೆಗಳು, ಗ್ರಂಥಾಲಯಗಳು ಹಾಗೂ ಇತರ ಸಂಘ–ಸಂಸ್ಥೆಗಳಿಗೆ ಮಹಾರಾಷ್ಟ್ರ ಸರ್ಕಾರದಿಂದ ಅನುದಾನ ನೀಡಲಾಗುತ್ತಿದೆ’ ಎಂದು ಹೇಳಿದರು. ಎಂಇಎಸ್‌ ಕಾರ್ಯಾಧ್ಯಕ್ಷ ಮನೋಹರ ಕಿಣೇಕರ್‌, ಪ್ರಧಾನ ಕಾರ್ಯದರ್ಶಿ ಮಾಲೋಜಿ ಅಷ್ಟೇಕರ್‌, ಸುನೀಲ ಅಷ್ಟೇಕರ್‌, ವಿಕಾಸ ಕಲಘಟಗಿ, ಎಂ.ಜಿ.ಪಾಟೀಲ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.