ADVERTISEMENT

ಹಿರಿಯ ನಾಗರಿಕರಿಗೆ ನೆರವಾಗಲು ನಿರ್ದೇಶನ

​ಪ್ರಜಾವಾಣಿ ವಾರ್ತೆ
Published 21 ಏಪ್ರಿಲ್ 2021, 18:11 IST
Last Updated 21 ಏಪ್ರಿಲ್ 2021, 18:11 IST
ಹೈಕೋರ್ಟ್
ಹೈಕೋರ್ಟ್   

ಬೆಂಗಳೂರು: ಕೋವಿಡ್ ಪ್ರಕರಣ ಹಠಾತ್ ಏರಿಕೆ ಆಗಿರುವ ಕಾರಣ ಹಿರಿಯ ನಾಗರಿಕರಿಗೆ ವೈದ್ಯಕೀಯ ನೆರವು ನೀಡಲು ಸಾಧ್ಯವಿರುವ ಎಲ್ಲಾ ಪ್ರಯತ್ನಗಳನ್ನು ಮಾಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.

ಹಿರಿಯ ನಾಗರಿಕರ ರಕ್ಷಣಾ ಕಾಯ್ದೆಯ ಸೆಕ್ಷನ್ 20ರ ಅಡಿಯಲ್ಲಿನ ನಿಯಮಗಳನ್ನು ವಿಶೇಷವಾಗಿ ಕೋವಿಡ್ ಆಸ್ಪತ್ರೆ ಮತ್ತು ಕೋವಿಡ್ ಲಸಿಕಾ ಕೇಂದ್ರಗಳಲ್ಲಿ ಪಾಲಿಸಲು ನಿರ್ದೇಶನ ನೀಡಬೇಕು ಎಂದು ರಾಜ್ಯ ಸರ್ಕಾರಕ್ಕೆ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ಸೂಚನೆ ನೀಡಿತು.

ಕೋವಿಡ್ ಸೋಂಕಿತ ಹಿರಿಯ ನಾಗರಿಕರಿಗೆ ಹಾಸಿಗೆ ವ್ಯವಸ್ಥೆ, ಚಿಕಿತ್ಸೆಯನ್ನು ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಖಾತರಿಪಡಿಸುವಂತೆ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸುತ್ತೋಲೆ ಹೊರಡಿಸುವಂತೆ ಪೀಠ ನಿರ್ದೇಶನ ನೀಡಿತು. ವಿಚಾರಣೆಯನ್ನು ಜೂ.18ಕ್ಕೆ ನಿಗದಿ ಮಾಡಿತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.